ಕಲಬುರಗಿ : ಜೇವರ್ಗಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಜೇವರ್ಗಿಯಿಂದ ಕಲಬುರಗಿ ಕಡೆಗೆ ಬರುತ್ತಿದ್ದ ಬೈಕ್‌ಗೆ, ಎದುರಿನಿಂದ ವೇಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೃತ ದುರ್ದೈವಿಗಳನ್ನು ಜೇವರ್ಗಿ ತಾಲೂಕಿನ ಕೋಳಕೂರು ಗ್ರಾಮದ 31 ವರ್ಷದ ಬಾಗಣ್ಣ ಮತ್ತು ಕೋಳಕೂರು ಗ್ರಾಮದ 32 ವರ್ಷದ ಶರಣಬಸಪ್ಪ. ಬೈಕ್‌ನಲ್ಲಿದ್ದ ಈ ಇಬ್ಬರೂ ಸವಾರರು ಟಿಪ್ಪರ್‌ನ ವೇಗದ ಹೊಡೆತಕ್ಕೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಅಪಘಾತದ ವಿಷಯ ತಿಳಿದ ಕೂಡಲೇ ಕಲಬುರಗಿ ಸಂಚಾರ ಠಾಣೆ-1ರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಅಪರಿಚಿತ ವ್ಯಕ್ತಿಯಿಂದ ಮಹಿಳೆಗೆ ಏಕಾಏಕಿ ಹಲ್ಲೆ – ಪುಂಡ ವ್ಯಕ್ತಿ ವಿರುದ್ಧ FIR.. ವಿಡಿಯೋ ವೈರಲ್!
Author: Btv Kannada
Post Views: 427







