ಕಲಬುರಗಿ : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ಷರತ್ತುಬದ್ಧ ಅನುಮತಿ ನೀಡಿದೆ. ನವೆಂಬರ್ 16ರಂದು ಈ ಪಥಸಂಚಲನ ನಡೆಸಲು ಅನುಮತಿ ನೀಡಿದೆ.

ನವೆಂಬರ್ 16ರಂದು ಮಧ್ಯಾಹ್ನ 3:30 ರಿಂದ ಸಂಜೆ 5:45ರ ವರೆಗೆ ಮಾತ್ರ ಪಥಸಂಚಲನ ನಡೆಸಲು ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ ಕೇವಲ 300 ಗಣವೇಷಧಾರಿಗಳು ಮಾತ್ರ ಭಾಗವಹಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ. ಬ್ಯಾಂಡ್ ವಾದ್ಯ ನುಡಿಸುವ ಸಿಬ್ಬಂದಿಯ ಸಂಖ್ಯೆಯನ್ನು 50ಕ್ಕೆ ಸೀಮಿತಗೊಳಿಸಲಾಗಿದೆ. ಪಥಸಂಚಲನದ ವೇಳೆ ಯಾವುದೇ ಪ್ರಚೋದನಕಾರಿ ಘೋಷಣೆಗಳನ್ನು ಕೂಗಬಾರದು ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.
ಇದನ್ನೂ ಓದಿ : ಚೀಟಿ ವ್ಯವಹಾರದಲ್ಲಿ ಮೋಸ.. 70 ಲಕ್ಷ ಸಾಲ – ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಸೂಸೈಡ್ ಬಗ್ಗೆ DCP ಅಕ್ಷಯ್ ಮಚೀಂದ್ರ ಮಾಹಿತಿ!
Author: Btv Kannada
Post Views: 225







