ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, ನಿತೀಶ್ ಕುಮಾರ್ ನೇತೃತ್ವದ NDA ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳುವ ತವಕದಲ್ಲಿದ್ದರೆ, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಪ್ರಬಲ ಪೈಪೋಟಿ ನೀಡಿದೆ.
ಬಿಹಾರದಲ್ಲಿ NDA ಶತಕ ಬಾರಿಸಿ ಮುನ್ನುಗ್ಗುತ್ತಿದ್ದು, NDA ಮೈತ್ರಿಕೂಟ 120 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ. NDA ಮೈತ್ರಿಕೂಟಕ್ಕೆ ಮಹಾಘಟಬಂಧನ್ ತೀವ್ರ ಸ್ಫರ್ಧೆನೀಡಿದೆ. ಮಹಾಘಟಬಂಧನ್ 95 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಭರ್ಜರಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಎನ್‌ಡಿಎ ಒಟ್ಟಾರೆ 120 ಸ್ಥಾನಗಳಲ್ಲಿ ಮುಂದಿದ್ದರೆ, ವಿಪಕ್ಷಗಳ ಒಕ್ಕೂಟ ಮಹಾಘಟಬಂಧನ್ ಅಭ್ಯರ್ಥಿಗಳು 95 ಸ್ಥಾನಗಳಲ್ಲಿ ಮುನ್ನಡೆ ಕಂಡುಕೊಂಡಿದ್ದಾರೆ. ಇತರರು ನಾಲ್ಕು ಸ್ಥಾನಗಳಲ್ಲಿ ಮುಂದಿದ್ದಾರೆ. ರಾಜ್ಯದ 38 ಜಿಲ್ಲೆಗಳ 243 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇದೇ ವೇಳೆ, 6 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 8 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆಯೂ ಆರಂಭವಾಗಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ 122 ಅನ್ನು ಯಾರು ತಲುಪಲಿದ್ದಾರೆ ಅನ್ನೋದನ್ನು ಕಾದುನೋಡಬೇಕಿದೆ.
ಇದನ್ನೂ ಓದಿ : ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ – ಮತ ಎಣಿಕೆಗೆ ಕ್ಷಣ ಗಣನೆ!







