ಮೈಸೂರು : ಮೈಸೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜೊಂದರ ಉಪನ್ಯಾಸಕ ಭರತ್ ಭಾರ್ಗವ ಎಂಬಾತನ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದು, ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.

ವಿದ್ಯಾರ್ಥಿನಿಯ ದೂರಿನ ಪ್ರಕಾರ, ಉಪನ್ಯಾಸಕ ಭರತ್ ಭಾರ್ಗವ ಪ್ರತಿದಿನವೂ ಕಿರುಕುಳ ನೀಡುತ್ತಿದ್ದು, ಹೆಚ್ಚು ಅಂಕಗಳನ್ನು ನೀಡುತ್ತೇನೆ, ಉತ್ತಮ ಕೆಲಸ ಕೊಡಿಸುತ್ತೇನೆ. ಹೊರಗಡೆ ಪಬ್ಗೆ ಹೋಗಿ ಮಜಾ ಮಾಡೋಣ ಬಾ ಎಂದು ಆಹ್ವಾನಿಸಿದ್ದಾನೆ. ಅಲ್ಲದೆ, ತಾನು ಹೇಳಿದಂತೆ ಕೇಳದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಆಕೆಯ ಖಾಸಗಿ ಅಂಗಾಂಗಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ.

ವಿದ್ಯಾರ್ಥಿನಿ ಈ ಬಗ್ಗೆ ಕಾಲೇಜಿನ ಮಹಿಳಾ ಉಪನ್ಯಾಸಕರ ಬಳಿ ದೂರು ನೀಡಿದ ನಂತರ, ಉಪನ್ಯಾಸಕ ಭರತ್ ಭಾರ್ಗವ ಆಕೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ BNS ಸೆಕ್ಷನ್ 126(2), 75(2) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಪನ್ಯಾಸಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತ ವಿದ್ಯಾರ್ಥಿನಿ ಮನವಿ ಮಾಡಿದ್ದಾಳೆ.
ಇದನ್ನೂ ಓದಿ : ಸೀರೆ ವಿಚಾರಕ್ಕೆ ಗಲಾಟೆ – ಕೋಪದಲ್ಲಿ ಮದುವೆಗೆ ಕೇವಲ 1 ಗಂಟೆ ಇದ್ದಾಗ ವಧುವನ್ನೇ ಕೊಲೆಗೈದ ವರ!







