ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಖೈದಿಗಳಿಗೆ ನೀಡಿದ ರಾಜಾತಿಥ್ಯದ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವೀರ್ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ಕಳೆದ ನವೆಂಬರ್ 13 ರಂದು ನಟ ಧನ್ವೀರ್ ಪೊಲೀಸರ ವಿಚಾರಣೆಗೆ ಗೈರಾಗಿದ್ದ. ತಮ್ಮ ವಕೀಲರ ಮೂಲಕ ಕಾಲಾವಕಾಶ ಕೇಳಿದ್ದರು. ನಂತರ ನ.15ರಂದು ಮತ್ತೊಂದು ನೋಟೀಸ್ ನೀಡಿದ್ದ ಪೊಲೀಸರು ಮತ್ತೊಮ್ಮೆ ವಿಚಾರಣೆಗೆ ಕರೆದಿದ್ದರು. ಇಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸರ ಮುಂದೆ ಇಂದು ಧನ್ವೀರ್ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.
ಈ ವಿಡಿಯೋ ವೈರಲ್ ಪ್ರಕರಣದಲ್ಲಿ ಧನ್ವೀರ್ ಲಾಕ್ ಆಗುವ ಭೀತಿಯಲ್ಲಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ, ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಆದರೂ, ಇಂದು ಧನ್ವೀರ್ ಪೊಲೀಸರ ಮುಂದೆ ಹಾಜರಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ಬಿಹಾರ ಸಿಎಂ ಕುರ್ಚಿ ನಿತೀಶ್‌ಗೆ, ಬಿಜೆಪಿ-ಎಲ್‌ಜೆಪಿಗೆ ಡಿಸಿಎಂ ಸ್ಥಾನ – ಸೀಟು ಹಂಚಿಕೆ ಫೈನಲ್!







