ಮೇಕೆದಾಟು ಯೋಜನೆಯಲ್ಲಿ ಕರ್ನಾಟಕಕ್ಕೆ ಜಯ – ವಕೀಲ ಶ್ಯಾಮ್ ದಿವಾನ್‌ಗೆ ನವದೆಹಲಿಯಲ್ಲಿ ಡಿಕೆಶಿ ಸನ್ಮಾನ!

ನವದೆಹಲಿ : ಮೇಕೆದಾಟು ಬಹುಪಯೋಗಿ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಇತ್ತೀಚೆಗೆ ಕರ್ನಾಟಕದ ಪರವಾಗಿ ಮಹತ್ವದ ತೀರ್ಪು ಬಂದಿದ್ದು, ರಾಜ್ಯದ ಪರ ಸಮರ್ಥವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಶ್ರೀ ಶ್ಯಾಮ್ ದಿವಾನ್ ಅವರನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಮೇಕೆದಾಟು ಯೋಜನೆ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕದ ಪರ ತೀರ್ಪು ಬಂದ ಹಿನ್ನೆಲೆಯಲ್ಲಿ, ಹಿರಿಯ ವಕೀಲ ಶ್ರೀ ಶ್ಯಾಮ್ ದಿವಾನ್ ಅವರನ್ನು ಉಪ ಮುಖ್ಯಮಂತ್ರಿ                      ಡಿ. ಕೆ. ಶಿವಕುಮಾರ್ ನವದೆಹಲಿಯಲ್ಲಿ ಸನ್ಮಾನಿಸಿದರು. ತಮಿಳುನಾಡು ಸರ್ಕಾರವು ಯೋಜನೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು. ಸುಪ್ರೀಂ ಕೋರ್ಟ್, ಈ ಹಂತದಲ್ಲಿ ಮಧ್ಯಪ್ರವೇಶಿಸದೆ, ಯೋಜನೆಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕೇಂದ್ರ ಜಲ ಆಯೋಗದ (CWC) ಪರಿಶೀಲನೆಗೆ ಒಪ್ಪಿಸಬೇಕು ಎಂದು ಸೂಚಿಸಿತು.

ಈ ತೀರ್ಪಿನಿಂದಾಗಿ ಬೆಂಗಳೂರಿನ ಕುಡಿಯುವ ನೀರು ಮತ್ತು ವಿದ್ಯುತ್‌ಗೆ ನಿರ್ಣಾಯಕವಾಗಿರುವ ಈ ಯೋಜನೆಯ ವಿವರವಾದ ಯೋಜನಾ ವರದಿ (DPR) ತಯಾರಿಸಲು ಕರ್ನಾಟಕಕ್ಕೆ ಹಸಿರು ನಿಶಾನೆ ಸಿಕ್ಕಂತಾಗಿದೆ. ದಿವಾನ್ ಅವರ ಸಮರ್ಥ ವಾದವೇ ಈ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ ಮಹತ್ವದ ತಿರುವು ನೀಡಿತು.

ಇದನ್ನೂ ಓದಿ : ನಮ್ಮ ಮೆಟ್ರೋ ಪ್ರಿಯರಿಗೆ ಗುಡ್​ನ್ಯೂಸ್.. ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ಮಹತ್ವದ ಹೆಜ್ಜೆ!

Btv Kannada
Author: Btv Kannada

Read More