ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಪುರಸ್ಕರಿಸಿದ್ದು, ಗಡಿಪಾರು ಆದೇಶವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.
ಪ್ರಕರಣದ ಕುರಿತು ಹೊಸದಾಗಿ ವಿಚಾರಣೆಯನ್ನು ನಡೆಸಿ, ಮುಂದಿನ 15 ದಿನಗಳೊಳಗೆ ಸೂಕ್ತವಾದ ಕಾರಣಗಳು ಮತ್ತು ಕಾನೂನಿನ ಸೆಕ್ಷನ್‌ಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಹೊಸ ಆದೇಶವನ್ನು ಹೊರಡಿಸಬೇಕು ಎಂದು ಪೀಠವು ಪುತ್ತೂರಿನ ಉಪವಿಭಾಗಾಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಹೈಕೋರ್ಟ್‌ನ ಈ ಆದೇಶದಿಂದಾಗಿ ತಿಮರೋಡಿ ಅವರ ಮೇಲಿದ್ದ ಗಡೀಪಾರು ಭೀತಿ ಸದ್ಯಕ್ಕೆ ದೂರವಾಗಿದೆ.
ಏನಿದು ಪ್ರಕರಣ? ತಿಮರೋಡಿಯನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿತ್ತು. ಗಡಿಪಾರು ಆದೇಶವನ್ನು ಮಹೇಶ್ ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಇದನ್ನೂ ಓದಿ : ವ್ಯಕ್ತಿ ಮೇಲೆ ಹಲ್ಲೆ – ಸಂಡೂರು CPI ಮಹೇಶ್ ಗೌಡ ವಿರುದ್ಧ ಕೇಸ್ ದಾಖಲಿಸಲು ಹೈಕೋರ್ಟ್ ಆದೇಶ!







