ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ಮೊಬೈಲ್ ನೋಡುತ್ತಿದ್ದ 21 ವರ್ಷದ ಶಹಬಾಜ್ ಎಂಬ ಯುವಕನ ಮೇಲೆ ಭೀಕರ ಚಾಕು ಇರಿತ ನಡೆದಿದೆ. ಆರೋಪಿ ನವೀನ್ ಚಾಕುವನ್ನು ಮರೆಮಾಚಿಕೊಂಡು ಬಂದು, ಯಾವುದೇ ಪ್ರಚೋದನೆ ಇಲ್ಲದೆ, ಏಕಾಏಕಿ ಹಠಾತ್ ದಾಳಿ ನಡೆಸಿದ್ದಾನೆ. ಈ ದಾಳಿಯಿಂದ ಯುವಕ ತೀವ್ರವಾಗಿ ಗಾಯಗೊಂಡಿದ್ದು, ದಾಳಿಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಶಹಬಾಜ್‌ಗೆ ತಕ್ಷಣ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕ ಸ್ಥಳದಲ್ಲಿ ಯುವಕನ ಮೇಲೆ ನಡೆದಿರುವ ಈ ಭಯಾನಕ ದಾಳಿಯ ಸಂಪೂರ್ಣ ದೃಶ್ಯಾವಳಿಯು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳ ಆಧಾರದ ಮೇಲೆ ವಿಜಯಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ : ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ – ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್!
Author: Btv Kannada
Post Views: 324







