ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಭೇಟಿ ಮಾಡಿದ್ದು, ರಾಜ್ಯಕ್ಕೆ ಸಂಬಂಧಿಸಿದಂತೆ ಹಲವು ವಿಷಗಳ ಬಗ್ಗೆ ಚರ್ಚೆ ಮಾಡಿದ್ದಾರೆ.
ನವದೆಹಲಿಯಲ್ಲಿರುವ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಮಹತ್ವದ ಚರ್ಚೆ ನಡೆಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, ಮಹದಾಯಿ ಮತ್ತು ಮೇಕೆದಾಟು ಯೋಜನೆಗಳು ಸೇರಿ ಹಲವು ಪ್ರಮುಖ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇನ್ನು ರಾಜ್ಯದ ಬೆಳೆ ಹಾನಿ, ಮಹಾದಾಯಿ ಯೋಜನೆ, ಮೇಕೆದಾಟು ಯೋಜನೆ, ಜಲ ಜೀವನ್ ಮಿಷನ್, ಏಮ್ಸ್ ನಿರ್ಮಾಣ, ಕಬ್ಬು ರೈತರ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಬೆಳೆಹಾನಿಯಿಂದ ಸುಮಾರು 10,700 ಕೋಟಿ ಹಾನಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಮಾಹಿತಿ ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸಾಥ್ ಕೊಟ್ಟಿದ್ದಾರೆ.
ಇದನ್ನೂ ಓದಿ : ಮೊಬೈಲ್ ನೋಡುತ್ತಿದ್ದ ಯುವಕನಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ !







