ವಿಜಯಪುರ : ಜಿಲ್ಲೆಯ ನಿಡಗುಂದಿ ಪಟ್ಟಣದ NH 50ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಹಾಗೂ ಆ್ಯಂಬುಲೆನ್ಸ್ ಚಾಲಕ ಸಾವನ್ನಪ್ಪಿದ್ದಾರೆ. ರಸ್ತೆ ದಾಟುವ ವೇಳೆ ಬೈಕ್ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಬೈಕ್ ಎಳೆದುಕೊಂಡು ಹೋದ ರಭಸದಿಂದ ಆ್ಯಂಬುಲೆನ್ಸ್ಗೆ ಡಿಕ್ಕಿ ಹೊಡೆದಿದೆ.
ಬೈಕ್ನಲ್ಲಿದ್ದ ಮುದ್ದೇಬಿಹಾಳ ತಾಲೂಕಿನ ಕಾಳಗಿ ಗ್ರಾಮದ ಬಿಎಸ್ಎಫ್ ಯೋಧ ಮೌನೇಶ ರಾಠೋಡ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಜ್ಜುಗುಜ್ಜಾದ ಆಂಬ್ಯುಲೆನ್ಸ್ನಲ್ಲಿ ಸಿಲುಕಿದ ಚಾಲಕ ಹಾಗೂ ಸಹಾಯಕನನ್ನ ಕ್ರೇನ್ ಸಹಾಯದಿಂದ ಇಬ್ಬರನ್ನು ಪೊಲೀಸರು ಹೊರತೆಗೆದಿದ್ದಾರೆ.
ಆ್ಯಂಬುಲೆನ್ಸ್ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ರಿತೇಶ ಪ್ರಸಾದ್ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ವಾಲ್ಮೀಕಿ ಹಗರಣ – ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ!

Author: Btv Kannada
Post Views: 634