ಧರ್ಮಸ್ಥಳ ಷಡ್ಯಂತ್ರ ಕೇಸ್ – ಚಿನ್ನಯ್ಯ ಸೇರಿ 6 ಮಂದಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ!

ದಕ್ಷಿಣ ಕನ್ನಡ : ದೇಶ-ವಿದೇಶಗಳಲ್ಲಿ ಭಾರೀ ಸದ್ದು ಮಾಡಿದ್ದ ಧರ್ಮಸ್ಥಳ ಷಡ್ಯಂತ್ರ ಪ್ರಕರಣ ಕೊನೆಗೂ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. SIT ತನಿಖೆಯಲ್ಲಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡಿರೋದು ದೃಢವಾಗಿದ್ದು, ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಅಪಪ್ರಚಾರ ಮಾಡಿದ ಬುರುಡೆ ಗ್ಯಾಂಗ್ ವಿರುದ್ಧ ಬೆಳ್ತಂಗಡಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಈ ಪ್ರಕರಣದ ವಿಶೇಷ ತನಿಖಾ ತಂಡದ (SIT) ಮುಖ್ಯ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಇದೀಗ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಧಿಕೃತವಾಗಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

SIT ಮುಖ್ಯ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಒಟ್ಟು 6 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್, ವಿಠ್ಠಲಗೌಡ ಸೇರಿ ಒಟ್ಟು 6 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಇದನ್ನೂ ಓದಿ : ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ’ ಒಂದು ವಾರ ತಡವಾಗಿ ತೆರೆಗೆ – ನ.27ಕ್ಕೆ ಚಿತ್ರ ರಿಲೀಸ್!

Btv Kannada
Author: Btv Kannada

Read More