ಮೈಸೂರು : ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ಈ ಕೃತ್ಯದಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.

ನಂಜನಗೂಡಿನ ಶ್ರೀರಾಂಪುರ ಬಡಾವಣೆಯಲ್ಲಿ ವಾಸವಾಗಿರುವ ಅಭಿ ನಾಗಭೂಷಣ್ ಮತ್ತು ಸಂತೋಷ್ ಎಂಬುವವರಿಗೆ ಸೇರಿದ ಎರಡು ಕಾರುಗಳನ್ನು ಮಧ್ಯರಾತ್ರಿ ವೇಳೆ ಗುರಿಯಾಗಿಸಿ ಬೆಂಕಿ ಹಚ್ಚಲಾಗಿದೆ. ಕಿಡಿಗೇಡಿಗಳು ಕಾರುಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಕಾರುಗಳು ಹೊತ್ತಿ ಉರಿಯುತ್ತಿದ್ದ ದೃಶ್ಯ ಕಂಡು ಅಕ್ಕಪಕ್ಕದ ನಿವಾಸಿಗಳು. ಕೂಡಲೇ ನೀರು ಎರಚಿ ಬೆಂಕಿಯನ್ನು ನಂದಿಸಿ ಅನಾಹುತ ತಪ್ಪಿಸಿದ್ದಾರೆ.

ನಂಜನಗೂಡು ಪಟ್ಟಣದಲ್ಲಿ ಗಾಂಜಾ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಈ ಕೃತ್ಯವನ್ನು ಗಾಂಜಾ ಮತ್ತಿನಲ್ಲಿರುವ ಯುವಕರ ಮಾಡುತ್ತಿದ್ದಾರೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಸ್ಥಳೀಯರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕಾಂಗ್ರೆಸ್ ಕೇವಲ ಜಾಹೀರಾತುಗಳಿಗೆ ಸೀಮಿತವಾಗಿರುವ ಸರ್ಕಾರ – ನಿಖಿಲ್ ಕುಮಾರಸ್ವಾಮಿ ಆಕ್ರೋಶ!







