ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ತಂದಿದ್ದ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿಯನ್ನ ಇದೀಗ ಮತ್ತೆ ಜಾರಿಗೆ ತಂದಿದೆ. ಈ ಬಗ್ಗೆ ಸರ್ಕಾರ ಮಹತ್ತರ ಘೋಷಣೆ ಮಾಡಿದ್ದು, ಆದೇಶ ಹೊರಡಿಸಿದೆ.
ಸಾರಿಗೆ ಇಲಾಖೆಯ ದಂಡ ಬಾಕಿ ಹಾಗೂ ಪೊಲೀಸ್ ಇಲಾಖೆಯ ಇ-ಚಲನ್ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ರಾಜ್ಯ ಸರಕಾರ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ. ಸರ್ಕಾರದ ಆದೇಶದಂತೆ ಇಂದಿನಿಂದಲೇ ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದ್ದು, ಈ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.
ಪೊಲೀಸ್ ಇಲಾಖೆಯು ಇ – ಚಲನ್ ಮೂಲಕ ದಾಖಲಿಸಿದ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಈ ಹಿಂದೆ 4 ಬಾರಿ ಶೇ. 50 ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೇ ಮೊದಲ ಬಾರಿಗೆ ಸಾರಿಗೆ ಇಲಾಖೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ರಿಯಾಯಿತಿ ಘೋಷಿಸಲಾಗಿದೆ. ಸಾರಿಗೆ ಇಲಾಖೆ ಅಧಿಕಾರಿಗಳು 1991 – 92 ರಿಂದ 2019 – 20ರವರೆಗೆ ದಾಖಲಿಸಿರುವ ಪ್ರಕರಣಗಳ ಬಾಕಿ ದಂಡ ಪಾವತಿಗೆ ರಿಯಾಯಿತಿ ಸಿಗಲಿದೆ.
ಇದನ್ನೂ ಓದಿ : ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – DRI ನಿಂದ 4,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ!







