ಬೆಂಗಳೂರು : ವಿಧಾನಸೌಧದ ಮುಂದೆ ನಡೆದ ನೇಪಾಳಿ ಹುಡುಗರ ನಡುವಿನ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣ ಸಂಬಂಧ ಸುಮಾರು 11 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬಂಧಿತ ಆರೋಪಿಗಳು ಬೆಂಗಳೂರಿನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಾಗಿ ಮತ್ತು ಹೋಟೆಲ್‌ಗಳಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದಿಂದ ಬಿಡುವು ಸಿಕ್ಕಾಗ ವಿಡಿಯೋಗಳನ್ನು ಮಾಡುವ ಚಟವನ್ನು ಬೆಳೆಸಿಕೊಂಡಿದ್ದರು. ವಿಡಿಯೋ ಮಾಡಿ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಲೈಕ್ ಮತ್ತು ಶೇರ್ ಗಳಿಸುವ ಹುಚ್ಚಾಟಕ್ಕೆ ಬಿದ್ದು ಈ ಘಟನೆ ನಡೆದಿದೆ.

ಈ ಹಿಂದೆ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ದಸ್ತಗಿರಿ ಮಾಡಿದ್ದರು. ತನಿಖೆಯನ್ನು ಮುಂದುವರಿಸಿದ ಪೊಲೀಸರು, ಉಳಿದವರನ್ನು ಸಹ ಪತ್ತೆ ಹಚ್ಚಿ ಒಟ್ಟು 11 ಜನರನ್ನು ಬಂಧಿಸಿದ್ದಾರೆ. ಈ ಹೊಡೆದಾಟದಲ್ಲಿ ಭಾಗಿಯಾಗಿದ್ದ ಉಳಿದವರಿಗಾಗಿ ಪೊಲೀಸರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.



ಇದನ್ನೂ ಓದಿ : ‘ತೀರ್ಥರೂಪ ತಂದೆಯವರಿಗೆ’ ಸಿನಿಮಾದ ಎರಡನೇ ಹಾಡು ರಿಲೀಸ್ – ನೀ ನನ್ನವಳೇ ಎಂದ ನಿಹಾರ್ ಮುಖೇಶ್!







