ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ರಾಜಾತಿಥ್ಯದ ವಿಡಿಯೋ ವೈರಲ್ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಇದೀಗ ಈ ಕೇಸ್ಗೆ ಸಂಬಂಧಿಸಿದಂತೆ ನಟ ಧನ್ವೀರ್ ಗೌಡ ಇಂದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಪೊಲೀಸರು ನಟ ದರ್ಶನ್ ಬಲಗೈ ಬಂಟ ಧನ್ವೀರ್ ಅವರನ್ನು ವಿಚಾರಣೆ ನಡೆಸಿದ್ದು, ಜೈಲಿನೊಳಗಿನ ವಿಡಿಯೋ ವೈರಲ್ ಬಗ್ಗೆ ಪೊಲೀಸರು ಪ್ರಶ್ನಿಸಿದ್ದಾರೆ. ನ.13ರಂದು ಧನ್ವೀರ್ಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿತ್ತು. ಆದರೆ ಧನ್ವೀರ್ ವಿಚಾರಣೆಗೆ ಹಾಜರಾಗದೆ ವಕೀಲರ ಮೂಲಕ ಕಾಲಾವಕಾಶ ಕೇಳಿದ್ರು. ಕಳೆದ ಸೋಮವಾರ ಠಾಣೆಯ ಬಳಿ ಆಗಮಿಸಿದ್ದರೂ ಸಹ, ಊಟ ಮಾಡಿ ಬರುವಂತೆ ಪೊಲೀಸರು ಹೇಳಿದಾಗ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ವಿಚಾರಣೆಗೆ ಗೈರಾಗಿದ್ದರು.

ಇಂದು ದರ್ಶನ್ ಆಪ್ತ ಧನ್ವೀರ್ ವಿಚಾರಣೆಗೆ ಹಾಜರಾಗಿದ್ದಾರೆ. ಸದ್ಯ, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿರುವ ಧನ್ವೀರ್ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವೈರಲ್ ಆಗಿರುವ ವಿಡಿಯೋ ಬಗ್ಗೆ ಮತ್ತು ಅದರಲ್ಲಿ ಅವರ ಪಾತ್ರದ ಬಗ್ಗೆ ಪೊಲೀಸರು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ.
ಇದನ್ನೂ ಓದಿ : ವಿಧಾನಸೌಧದ ಮುಂದೆ ನೇಪಾಳಿ ಹುಡುಗರ ಹೊಡೆದಾಟ ಕೇಸ್ – 11 ಮಂದಿ ಅರೆಸ್ಟ್!







