ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಚಿವ ಚೆಲುವರಾಯಸ್ವಾಮಿ ಪುತ್ರ ಆಯ್ಕೆ!

ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿರುವ ಕೃಷಿ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ ಅವರು ನೇರವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇಷ್ಟು ದಿನ ಸಿನಿಮಾ ಕ್ಷೇತ್ರದಲ್ಲಿ ಬ್ಯುಸಿಯಾಗಿದ್ದ ಸಚಿನ್ ಚಲುವರಾಯಸ್ವಾಮಿ ಇದೀಗ ರಾಜಕೀಯ ರಂಗಕ್ಕೆ ಅಧಿಕೃತವಾಗಿ ಪ್ರವೇಶಿಸಿದ್ದಾರೆ.

ಹೌದು.. ಸಚಿನ್ ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ (MDCC) ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್ ರಾಜಕೀಯ ಬುನಾದಿಗೆ ಹೆಜ್ಜೆ ಇಟ್ಟಿದ್ದಾರೆ.

ಈ ಬಾರಿಯ ಎಂಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್ ತೀವ್ರ ಸ್ಪರ್ಧೆ ಒಡ್ಡುವಲ್ಲಿ ವಿಫಲವಾಯಿತು. ಮತದಾನಕ್ಕೂ ಮೊದಲೇ 12 ಸ್ಥಾನಗಳಲ್ಲಿ 9 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿತ್ತು. ಉಳಿದ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಗೆದ್ದಿದ್ದು, ಒಂದು ಕ್ಷೇತ್ರದಲ್ಲಷ್ಟೇ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಎಂಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯಲ್ಲಿ 11 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಬೆಂಬಲಿತರ ಪಡೆ ಪ್ರಾಬಲ್ಯ ಸಾಧಿಸಿದೆ.

ಸಚಿನ್ ಚಲುವರಾಯಸ್ವಾಮಿ ಅವರು ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ಈ ಗೆಲುವಿಗೆ ಬೆಂಬಲ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಸಚಿನ್ ಚೆಲುವರಾಯಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ, MDCC ನೂತನ ಅಧ್ಯಕ್ಷರಾಗಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಕಾರ್ಯಕರ್ತರು, ಜನಪ್ರತಿನಿಧಿಗಳು ಮತ್ತು ಸಹಕಾರ ಕ್ಷೇತ್ರದ ಬಂಧುಗಳ ವಿಶ್ವಾಸಕ್ಕೆ ನನ್ನ ಪ್ರಣಾಮಗಳು. ಈ ಗೆಲುವು ಕೇವಲ ನನ್ನದಲ್ಲ, ಇದು ನಮ್ಮ ಪಕ್ಷದ ಕಾರ್ಯಕರ್ತರ ಸಾಮೂಹಿಕ ಶ್ರಮ ಮತ್ತು ಹಿರಿಯರ ಆಶೀರ್ವಾದದ ಫಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ 7.11 ಕೋಟಿ ರಾಬರಿ ಕೇಸ್ – ಕಿಂಗ್ ಪಿನ್ ರವಿ ಪತ್ನಿ ಪೊಲೀಸರ ವಶಕ್ಕೆ!

Btv Kannada
Author: Btv Kannada

Read More