ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋ ವೈರಲ್ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪೊಲೀಸರ ತನಿಖೆ ವೇಳೆ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರ ಹೆಸರು ಬಯಲಾಗಿದೆ.
ಎರಡನೇ ಬಾರಿ ನೋಟಿಸ್ ನೀಡಿ ವಿಚಾರಣೆ ನಡೆಸಿದಾಗ, ನಟ ಧನ್ವೀರ್ ವಿಜಯಲಕ್ಷ್ಮೀ ಅವರ ಹೆಸರನ್ನು ಬಾಯಿ ಬಿಟ್ಟಿದ್ದಾರೆ. ಧನ್ವೀರ್ ಅವರು ವಕೀಲರಿಂದ ವಿಡಿಯೋ ಪಡೆದು ಅದನ್ನು ವಿಜಯಲಕ್ಷ್ಮೀ ಅವರಿಗೆ ಕಳುಹಿಸಿದ್ದಾಗಿ ಪೊಲೀಸರಿಗೆ ಹೇಳಿದ್ದಾರೆ.
ನಾನು ವಿಡಿಯೋವನ್ನು ವೈರಲ್ ಮಾಡಿಲ್ಲ, ಅದು ಹೇಗೆ ವೈರಲ್ ಆಯಿತೋ ಗೊತ್ತಿಲ್ಲ ಎಂದು ಧನ್ವೀರ್ ಹೇಳಿದ್ದಾರೆ. ಧನ್ವೀರ್ ಹೇಳಿಕೆಯ ಹಿನ್ನೆಲೆಯಲ್ಲಿ, ಪರಪ್ಪನ ಅಗ್ರಹಾರ ಪೊಲೀಸರು ಇದೀಗ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ವಿಡಿಯೋ ಮೂಲ ಮತ್ತು ಅದು ಸಾಮಾಜಿಕ ಜಾಲತಾಣಗಳಲ್ಲಿ ಹೇಗೆ ವೈರಲ್ ಆಯ್ತು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಕಿಚ್ಚ ಸುದೀಪ್ ‘ಮಾರ್ಕ್’ ಚಿತ್ರದ ಜೊತೆ ಏರ್‌ಟೆಲ್ ಸಹಭಾಗಿತ್ವ!







