ನವದೆಹಲಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಇಂದು ಬಿ.ವೈ ವಿಜಯೇಂದ್ರ ಭೇಟಿ ಮಾಡಿದ್ದಾರೆ. ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಅವರು ನವದೆಹಲಿಯಲ್ಲಿ ಭೇಟಿ ಮಾಡಿ, ರಾಜ್ಯದಲ್ಲಿ ಪಕ್ಷ ಸಂಘಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿ, ವಿಜಯೇಂದ್ರ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಮಾರ್ಗದರ್ಶನ ಪಡೆದರು.

ಈ ಬಗ್ಗೆ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಪಕ್ಷದ ಸೈದ್ಧಾಂತಿಕತೆ, ವೈಚಾರಿಕ ಸ್ಪಷ್ಟತೆ ಹೊಂದಿರುವ ಸಂತೋಷ್ ಜೀ ಅವರ ಮಾತುಗಳು ನನ್ನಂತಹ ಲಕ್ಷಾಂತರ ಕಾರ್ಯಕರ್ತರಿಗೆ ಸದಾ ಸ್ಫೂರ್ತಿಯಾಗಿದೆ ಎಂದಿದ್ದಾರೆ.
ಇದನ್ನೂ ಓದಿ : ಸ್ಯಾಂಡಲ್ವುಡ್ನಲ್ಲಿ ಎಸ್. ನಾರಾಯಣ್ ಮತ್ತೆ ಕಮಾಲ್ – ಶ್ರೇಯಸ್ ಮಂಜು, ದುನಿಯಾ ವಿಜಯ್ ಸಿನಿಮಾ ‘ಮಾರುತ’ ಸೂಪರ್ ಹಿಟ್!







