ಬೆಂಗಳೂರು : ಖಾಸಗಿ ಕಂಪನಿಯೊಂದರ CEO ಅವರನ್ನು ಕಿಡ್ನಾಪ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಕೋರಮಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ ಸಹ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಗಳ ತಂಡವು ಐಟಿ ಅಧಿಕಾರಿಗಳ ಸೋಗಿನಲ್ಲಿ ಸಿಇಒ ಅವರನ್ನು ಕಿಡ್ನಾಪ್ ಮಾಡಿದ್ದರು.
ಆರೋಪಿಗಳ ವಿಚಾರಣೆ ವೇಳೆ ಹಣಕಾಸಿನ ವಿಚಾರಕ್ಕೆ ಕಿಡ್ನಾಪ್ ಮಾಡಿರೋದಾಗಿ ಹೇಳಿದ್ದಾರೆ. ಈ ಪ್ರಕರಣ ಸಂಬಂಧ ಕೋರಮಂಗಲ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಚಿಂತಾಮಣಿಯಲ್ಲಿ ‘ಅಖಂಡ-2’ ಸಿನಿಮಾದ ಟ್ರೇಲರ್ ಲಾಂಚ್ – ಬಾಲಯ್ಯ ಸಿನಿಮಾಗೆ ಶಿವಣ್ಣ ಸಾಥ್!
Author: Btv Kannada
Post Views: 234







