ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ಇನ್ನಿಲ್ಲ – ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರು!

ಮುಂಬೈ : ಬಾಲಿವುಡ್‌ನ ಹಿರಿಯ ನಟ ಮತ್ತು “ಹೀ-ಮ್ಯಾನ್” ಎಂದೇ ಖ್ಯಾತಿ ಪಡೆದಿದ್ದ ಧರ್ಮೇಂದ್ರ ಅವರು ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.


ಧರ್ಮೇಂದ್ರ ಅವರ ನಿಧನದ ಸುದ್ದಿ ಇಡೀ ಚಿತ್ರರಂಗ ಮತ್ತು ಅಭಿಮಾನಿಗಳನ್ನು ಆಘಾತಕ್ಕೀಡು ಮಾಡಿದೆ. ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು 300ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಶೋಲೆ, ಚುಪ್ಕೆ ಚುಪ್ಕೆ, ಯಾದೋಂಕಿ ಬಾರಾತ್, ನಂತಹ ಅಸಂಖ್ಯಾತ ಹಿಟ್ ಚಿತ್ರಗಳ ಮೂಲಕ ಅವರು ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ : ಹೆದ್ದೂರ್ ಮಂಜುನಾಥ್ ಶೆಟ್ಟಿ ನಿರ್ದೇಶನದ “ಪಾಠಶಾಲಾ” ನ. 28ರಂದು ಬಿಡುಗಡೆ!

Btv Kannada
Author: Btv Kannada

Read More