ಬೆಳ್ಳಂಬೆಳಗ್ಗೆ ಲೋಕಾ ಪೊಲೀಸರ ಮೆಗಾ ರೇಡ್ – ಬೆಂಗಳೂರು ಸೇರಿ ರಾಜ್ಯದ 10 ಕಡೆ ಲೋಕಾಯುಕ್ತ ದಾಳಿ!

ಬೆಂಗಳೂರು ಸೇರಿ ರಾಜ್ಯದ ಹಲವು ಪ್ರಮುಖ ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಮುಂಜಾನೆ ಬೃಹತ್ ಕಾರ್ಯಾಚರಣೆ ನಡೆಸಿ, 11 ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ಮೆಗಾ ರೇಡ್ ನಡೆದಿದ್ದು, ಅಧಿಕಾರಿಗಳ ಆಸ್ತಿ-ಪಾಸ್ತಿ ಮತ್ತು ಇತರ ದಾಖಲೆಗಳ ಪರಿಶೀಲನೆ ತೀವ್ರವಾಗಿ ನಡೆಯುತ್ತಿದೆ.

ರಾಜ್ಯದ 10ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿರುವ ಪ್ರಮುಖ ಅಧಿಕಾರಿಗಳು. ಬೆಂಗಳೂರು – ಎಲೆಕ್ಟ್ರಾನಿಕ್ ಸಿಟಿ RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ – ನಗರ ಪಾಲಿಕೆ CAO ಪುಟ್ಟಸ್ವಾಮಿ, ಬೀದರ್ – ಕೃಷ್ಣಾ ಮೇಲ್ದಂಡೆ ಯೋಜನೆ (KUWSIP) ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್, ಮೈಸೂರು – ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್‌ಪೆಕ್ಟರ್ ರಾಮಸ್ವಾಮಿ ಸಿ, ಧಾರವಾಡ -ಕರ್ನಾಟಕ ವಿ.ವಿ. ಸಹಾಯಕ ಪ್ರಾಧ್ಯಾಪಕ ಸುಭಾಶ್ ಚಂದ್ರ, ಧಾರವಾಡ – ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್, ಶಿವಮೊಗ್ಗ – SIMS ಮೆಡಿಕಲ್ ಕಾಲೇಜ್ FDA ಲಕ್ಷ್ಮೀಪತಿ ಸಿ.ಎನ್, ದಾವಣಗೆರೆ – APMC ಸ. ನಿರ್ದೇಶಕ ಪ್ರಭು ಜೆ, ಮೈಸೂರು ಮಡಿಕೇರಿ PWD, ಸ.ಅ.ಇಂಜಿನಿಯರ್ ಗಿರೀಶ್ ಡಿ.ಎಂ, ಹಾವೇರಿ- ಶೇಕಪ್ಪ, ಇಇ, ಯೋಜನಾ ನಿರ್ದೇಶಕ ಕಚೇರಿ ಹಾವೇರಿ

ದಾಳಿಗೊಳಗಾದ ಅಧಿಕಾರಿಗಳ ಸಂಪೂರ್ಣ ಆಸ್ತಿ ವಿವರ, ಬ್ಯಾಂಕ್ ಖಾತೆಗಳು, ಚಿನ್ನಾಭರಣ, ಸ್ಥಿರ ಮತ್ತು ಚರಾಸ್ತಿಗಳ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಅಕ್ರಮ ಆಸ್ತಿ ಪ್ರಮಾಣ ಮತ್ತು ಇತರ ಸಾಕ್ಷ್ಯಾಧಾರಗಳು ಸಿಕ್ಕ ನಂತರ ಹೆಚ್ಚಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಹೇಳಿದ್ದಾರೆ.

ಇದನ್ನೂ ಓದಿ : ಶೇಷಾದ್ರಿಪುರಂನಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿ – ಭ್ರಷ್ಟಾಚಾರದ ಆರೋಪದಲ್ಲಿ ಅಧಿಕಾರಿಗಳ ವಿರುದ್ಧ ದೂರು!

Btv Kannada
Author: Btv Kannada

Read More