ಉತ್ತರ ಕರ್ನಾಟಕದಲ್ಲಿ ನಿಖಿಲ್ ಕುಮಾರಸ್ವಾಮಿ ‘ರಣಕಹಳೆ’ – ರೈತರ ಪರ ಬೃಹತ್ ಪಾದಯಾತ್ರೆ!

ರಾಯಚೂರು : ನಿಖಿಲ್ ಕುಮಾರಸ್ವಾಮಿ ಅವರು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಜೆಡಿಎಸ್ ನೇತೃತ್ವದಲ್ಲಿ ರೈತರ ಪರವಾಗಿ ಬೃಹತ್ ‘ರಣಕಹಳೆ’ ಮೊಳಗಿಸಿದರು. ತುಂಗಭದ್ರಾ ಜಲಾಶಯದ ನೀರು ನಿರ್ವಹಣೆ ವೈಫಲ್ಯ ಮತ್ತು ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಇಲ್ಲದಿರುವ ಬಗ್ಗೆ ನಡೆದ ಈ ಶಕ್ತಿ ಪ್ರದರ್ಶನದಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು. ನಿಖಿಲ್ ಕುಮಾರಸ್ವಾಮಿ ಅವರು ರೈತರೊಂದಿಗೆ ಹೆಜ್ಜೆ ಹಾಕಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತುಂಗಭದ್ರಾ ಡ್ಯಾಂನಿಂದ ರೈತರ ಬೆಳೆಗಳಿಗೆ ತಕ್ಷಣವೇ ನೀರು ಬಿಡುಗಡೆ ಮಾಡುವಂತೆ ಆಗ್ರಹ, ರೈತರ 2ನೇ ಬೆಳೆಗೆ ನೀರು ಹರಿಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಖಂಡನೆ, ಡ್ಯಾಂ ಗೇಟ್ ಅಳವಡಿಕೆ ವಿಳಂಬ ಧೋರಣೆಯನ್ನು ಖಂಡಿಸಿ ಪ್ರತಿಭಟನೆ, ಭತ್ತಕ್ಕೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ಘೋಷಣೆ ಮತ್ತು ಖರೀದಿ ಕೇಂದ್ರಗಳನ್ನು ತಕ್ಷಣವೇ ಆರಂಭಿಸುವಂತೆ ಒತ್ತಾಯ, ಮೆಕ್ಕೆಜೋಳಕ್ಕೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಕೇಂದ್ರಗಳನ್ನು ತೆರೆಯಲು ಆಗ್ರಹ.

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ತುಂಗಭದ್ರಾ ಜಲಾಶಯದ ಬಳಿ ಸುಮಾರು 3 ಕಿಲೋಮೀಟರ್ ದೂರದವರೆಗೆ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆದರು. ನೀರಿನ ಕೊರತೆಯಿಂದ ನಷ್ಟ ಅನುಭವಿಸುತ್ತಿರುವ ರೈತರಿಗೆ ಒಂದು ಕಠಿಣ ಎಚ್ಚರಿಕೆಯನ್ನು ನೀಡಿದ್ದಾರೆ. ಯಾವುದೇ ಕಾರಣಕ್ಕೂ 2ನೇ ಬೆಳೆಗೆ ನೀರು ಹರಿಸಲು ಸಾಧ್ಯವಾಗದಿದ್ದರೆ, ತಕ್ಷಣವೇ ಸರ್ಕಾರ ಪ್ರತಿ ಎಕರೆಗೆ ₹50,000 ಪರಿಹಾರ ಧನ ನೀಡಬೇಕು. ಸಾವಿರಾರು ರೈತರು ನಿಖಿಲ್ ಕುಮಾರಸ್ವಾಮಿ ಅವರ ಜೊತೆ ಹೋರಾಟಕ್ಕೆ ಹೆಜ್ಜೆ ಹಾಕಿದರು.

ಇದನ್ನೂ ಓದಿ : ಮಹಾಶಿವರಾತ್ರಿಗೆ ನಿಖಿಲ್ ಸಿದ್ದಾರ್ಥ್ ನಟನೆಯ ‘ಸ್ವಯಂಭು’ ರಿಲೀಸ್!

Btv Kannada
Author: Btv Kannada

Read More