ಕನಕಪುರ : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ನಾಯಕತ್ವ ಬದಲಾವಣೆ ವಿಚಾರದ ಕುರಿತು ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಭೆ ನಡೆಸುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನಕಪುರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಅದು ನನಗೆ ಗೊತ್ತಿಲ್ಲ, ನಾನೇನೂ ಕೇಳಿಲ್ಲ. ಇದು ನಮ್ಮ ಐದಾರು ಜನರ ಗುಟ್ಟಿನ ವ್ಯಾಪಾರ. ನಾನು ಇದನ್ನು ಬಹಿರಂಗವಾಗಿ ಚರ್ಚಿಸುವುದಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಕೆಲಸ ಮಾಡಬೇಕು. ಪಕ್ಷಕ್ಕೆ ಮುಜುಗರ ತರುವುದು ನನಗೆ ಇಷ್ಟವಿಲ್ಲ. ಪಕ್ಷವನ್ನು ವೀಕ್ ಮಾಡಲು ಇಷ್ಟವಿಲ್ಲ, ಪಕ್ಷವಿದ್ದರೆ ನಾವು ಇರುತ್ತೇವೆ. ನಮ್ಮ ಮುಖ್ಯಮಂತ್ರಿಗಳು ಹೇಳಿದ್ದಾರೆ, ಅವರು ನಮ್ಮ ಪಕ್ಷದ ಆಸ್ತಿ. ಅವರು ಈಗಾಗಲೇ ಏಳೂವರೆ ವರ್ಷಗಳ ಕಾಲ ಸಿಎಂ ಆಗಿದ್ದಾರೆ.

ಇನ್ನೂ ಮುಂದಿನ ಬಜೆಟ್ ಮಂಡನೆ ಮಾಡ್ತೀನಿ ಅಂತಲೂ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ದುಡಿದಿದ್ದಾರೆ, ಪಕ್ಷ ಕಟ್ಟಿದ್ದಾರೆ. ನಾವೆಲ್ಲ ಸೇರಿ 2028ರ ಗುರಿ ನೋಡ್ತಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಉತ್ತರ ಕರ್ನಾಟಕದಲ್ಲಿ ನಿಖಿಲ್ ಕುಮಾರಸ್ವಾಮಿ ‘ರಣಕಹಳೆ’ – ರೈತರ ಪರ ಬೃಹತ್ ಪಾದಯಾತ್ರೆ!







