ಬೆಂಗಳೂರು : ಕರ್ನಾಟಕ ರಾಜ್ಯಕ್ಕೆ ನೇಮಕಗೊಂಡಿರುವ 2024ನೇ ಬ್ಯಾಚ್‌ನ ಪ್ರೊಬೆಷನರಿ ಐ.ಪಿ.ಎಸ್ ಅಧಿಕಾರಿಗಳ ತಂಡವು ಇಂದು ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವೃತ್ತಿ ಜೀವನಕ್ಕೆ ಕಾಲಿಡುತ್ತಿರುವ ನೂತನ ಅಧಿಕಾರಿಗಳಿಗೆ ಮಹತ್ವದ ಜವಾಬ್ದಾರಿಯ ಕುರಿತು ಅಭಿನಂದಿಸಿ, ಶುಭ ಹಾರೈಸಿದರು.

ಪ್ರೊಬೆಷನರಿ ಐ.ಪಿ.ಎಸ್ ಅಧಿಕಾರಿಗಳನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಂತಹ ಮಹತ್ತರ ಜವಾಬ್ದಾರಿಯನ್ನು ಹೊತ್ತು ಈ ಯುವ ಅಧಿಕಾರಿಗಳು ತಮ್ಮ ವೃತ್ತಿ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸಾರ್ವಜನಿಕರ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಅವರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯದ ಪ್ರಮುಖ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ (DGP) ಎಂ.ಎ.ಸಲೀಂ ಮತ್ತು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ (ADGP) ರವಿ ಅವರು ನೂತನ ಅಧಿಕಾರಿಗಳಿಗೆ ತಮ್ಮ ಬೆಂಬಲ ಮತ್ತು ಮಾರ್ಗದರ್ಶನವನ್ನು ನೀಡಿದರು.
ಇದನ್ನೂ ಓದಿ : ‘ಕುರ್ಚಿ ಕದನ’ದ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಮನೆ ದೇವರಿಗೆ ವಿಶೇಷ ಪೂಜೆ!







