ನೆಲಮಂಗಲ : ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. 34 ವರ್ಷದ ಪ್ರೇಮ್ ಕುಮಾರ್, 35 ವರ್ಷದ ರಮೇಶ್ ಮೃತರು.
ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಕ್ರಾಸ್ ಮಾಡುತ್ತಿದ್ದ ಟ್ರಾಕ್ಟರ್ಗೆ ಲಾರಿ ಡಿಕ್ಕಿ ಹೊಡೆದಿದ್ದು, ಟ್ರಾಕ್ಟರ್ ಚಕ್ರಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಇಬ್ಬರು ದುರ್ಮರಣ ಹೊಂದಿದ್ದಾರೆ.

ಅವೈಜ್ಞಾನಿಕ ರಸ್ತೆ ಯೂಟರ್ನ್ ಮಾಡಿರುವುದೇ ಅಪಘಾತಕ್ಕೆ ಕಾರಣವಾಗಿದೆ. ಪದೇ ಪದೇ ಇದೇ ಸ್ಥಳದಲ್ಲಿ ಅಪಘಾತದ ಪ್ರಕರಣಗಳು ಹೆಚ್ಚಾಗ್ತಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : 10 ಭ್ರಷ್ಟರು, 47 ಕಡೆ ಲೋಕಾಯುಕ್ತ ದಾಳಿ – ಕೋಟ್ಯಂತರ ರೂ. ಅಕ್ರಮ ಆಸ್ತಿ ಪತ್ತೆ!
Author: Btv Kannada
Post Views: 374







