ಬೆಂಗಳೂರು : ಎಣ್ಣೆ ಏಟಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಪಲ್ಟಿಯಾಗಿರುವ ಘಟನೆ ಬೆಂಗಳೂರು ಸ್ಯಾಂಕಿ ಟ್ಯಾಂಕ್ ಬಳಿ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ.

ನಾಲ್ಕು ಮಂದಿ ಯುವಕರು ಪ್ರಯಾಣಿಸುತ್ತಿದ್ದ ಕಾರು ಅತ್ಯಂತ ವೇಗವಾಗಿ ಚಲಿಸುತ್ತಿತ್ತು. ಚಾಲಕ ಸಂಪೂರ್ಣವಾಗಿ ಮದ್ಯದ ಮತ್ತಿನಲ್ಲಿ ಇದ್ದು, ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ್ದಾನೆ. ಅತಿ ವೇಗದಲ್ಲಿ ಬರುತ್ತಿದ್ದಾಗ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಕಾರು ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ.

ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಕಾರಿನ ಸೀಟುಗಳಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದೇ ಈ ದುರಂತಕ್ಕೆ ಮುಖ್ಯ ಕಾರಣ ಎಂದು ಸಂಚಾರಿ ಪೊಲೀಸರು ದೃಢಪಡಿಸಿದ್ದಾರೆ.
ಇದನ್ನೂ ಓದಿ : ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ – ಕರ್ನಾಟಕದ ಮುಂದಿನ ಮುಖ್ಯಮಂತ್ರಿ ನಿರ್ಧಾರ!







