ಬೆಂಗಳೂರು : ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ತಾರಕಕ್ಕೇರಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖಾಮುಖಿಯಾಗಿದ್ದಾರೆ. ಡಿಸಿಎಂ ಡಿಕೆಶಿ ಅವರು ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು, ಮುಖ್ಯಮಂತ್ರಿಗಳು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೊತೆಯಲ್ಲಿ ಬ್ರೇಕ್‌ಫಾಸ್ಟ್ ಮಾಡಿದ್ದಾರೆ. ಉಪಹಾರ ಸೇವಿಸುತ್ತಾ ಸಿಎಂ, ಡಿಸಿಎಂ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಬ್ರೇಕ್ಫಾಸ್ಟ್ಗೆ ಖಾರಬಾತ್, ಇಡ್ಲಿ, ವಡೆ, ಚಟ್ನಿ ಇತ್ತು. ಈ ಬ್ರೇಕ್‌ಫಾಸ್ಟ್ ಮೀಟಿಂಗ್ಗೆ ಬೇರೆಯವರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಇನ್ನೂ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಹಿನ್ನೆಲೆ ಸಿಎಂ ಕಾವೇರಿ ನಿವಾಸದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಹೆಚ್ಚುವರಿಯಾಗಿ 3 ಕೆಎಸ್‌ಆರ್‌ಪಿ ತುಕಡಿ, 2 ಬಸ್ ನಿಯೋಜನೆ ಮಾಡಲಾಗಿದೆ. ಅಸಲಿಗೆ, ಕಾಂಗ್ರೆಸ್ ಹೈಕಮಾಂಡ್ ನಿಂದಲೇ ಇಂಥದ್ದೊಂದು ಸೂಚನೆ ಬಂದಿದ್ದು, ಹೈಕಮಾಂಡ್ ಸೂಚನೆಯಂತೆ ಬ್ರೇಕ್‌ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದೆ.
ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ ಸಮಸ್ಯೆಯನ್ನ ನೀವಿಬ್ಬರೇ ಕುಳಿತು ಬಗೆಹರಿಸಿಕೊಳ್ಳಿ. ಪರಸ್ಪರ ಭೇಟಿಯಾಗಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬನ್ನಿ. ಕಿತ್ತಾಡಿಕೊಂಡು ಬಂದ್ರೆ ನಾವು ಸಂಧಾನ ಮಾಡಲ್ಲ ಎಂದು ಖುದ್ದು ಹೈಕಮಾಂಡ್ ನಾಯಕರೇ ಸೂಚಿಸಿದೆ. ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಅವರು ಡಿಕೆಶಿ ಅವರನ್ನು ಆಹ್ವಾನಿಸಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆ ಕಿತ್ತಾಟಕ್ಕೆ ಇಂದು ಬಹುತೇಕ ತೆರೆ ಬೀಳುವ ಸಾಧ್ಯತೆಯಿದೆ.
ಇದನ್ನೂ ಓದಿ : ಎಣ್ಣೆ ಏಟಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ – ಬೆಂಗಳೂರು ಸ್ಯಾಂಕಿ ಟ್ಯಾಂಕ್ ಬಳಿ ಪಲ್ಟಿ.. ಇಬ್ಬರಿಗೆ ಗಂಭೀರ ಗಾಯ!







