ನನ್ನ-ಡಿಕೆಶಿ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ – ಸಿಎಂ, ಡಿಸಿಎಂ ಮಹತ್ವದ ಘೋಷಣೆ!

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾಯಕತ್ವ ವಿಚಾರವಾಗಿ ಮಹತ್ವದ ಘೋಷಣೆ ಮಾಡಿದರು.

ನಾವು ಒಟ್ಟಿಗೆ ಕುಳಿತು ಚರ್ಚೆ ಮಾಡಿದ್ದೇವೆ, ನನ್ನ – ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಮುಂದಿನ ಚುನಾವಣೆಯಲ್ಲಿ ನಾವು ಇಬ್ಬರೂ ಒಟ್ಟಾಗಿ ಇರ್ತೇವೆ, ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಇರ್ತೇವೆ, ನಮ್ಮಲ್ಲಿ ಯಾವ ಗುಂಪುಗಾರಿಕೆಗೂ ಅವಕಾಶ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ & ಜೆಡಿಎಸ್ ನಾಯಕರಿಂದ ಅನಗತ್ಯವಾಗಿ ಗೊಂದಲಗಳು ನಿರ್ಮಾಣ ಆಗಿವೆ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಮಗೆ ಬಹಳ ಮುಖ್ಯ. ಅದರ ಬಗ್ಗೆಯೂ ಚರ್ಚೆ ಮಾಡಿದ್ವಿ. 2028ರಲ್ಲೂ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು ಅನ್ನೋದ್ರೆ ಬಗ್ಗೆ ಚರ್ಚೆ ಮಾಡಿದ್ವಿ. 2023ರಲ್ಲಿ ಹೇಗೆ ನಾವಿಬ್ಬರು ಒಟ್ಟಿಗೆ ಕೆಲಸ ಮಾಡಿದ್ವೋ ಅದೇ ರೀತಿ ಮುಂದೆನೂ ಒಟ್ಟಿಗೆ ಕೆಲಸ ಮಾಡ್ತೀವಿ. ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ತೇವೆ ಎಂದು ಒಗ್ಗಟ್ಟಿನ ಸಂದೇಶ ಸಾರಿದರು.

ಇದನ್ನೂ ಓದಿ : ಬೆಂಗಳೂರಲ್ಲಿ IT ರೇಡ್ – 100 ಕೋಟಿ ರೂ. ಮೌಲ್ಯದ ಅಕ್ರಮ ವಹಿವಾಟು ಬಯಲು!

Btv Kannada
Author: Btv Kannada

Read More