ನವದೆಹಲಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಫೈನಲ್ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಹಾಲಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಕನ್ನಡಿಗ ಪ್ರಹ್ಲಾದ್ ಜೋಶಿ ಅವರಿಗೆ ಈ ಉನ್ನತ ಸ್ಥಾನ ಒಲಿಯುವ ಸಾಧ್ಯತೆ ಹೆಚ್ಚಾಗಿದೆ.

ಕಳೆದ ಕೆಲ ದಿನಗಳಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆ ಕಸರತ್ತು ಅಂತಿಮ ಘಟ್ಟ ತಲುಪಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಧರ್ಮೇಂದ್ರ ಪ್ರಧಾನ್ ಅವರ ಹೆಸರುಗಳು ಪ್ರಬಲವಾಗಿ ಕೇಳಿ ಬರುತ್ತಿವೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಜೋಶಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟ ಕಟ್ಟಲು ಮುಂದಾಗಿದ್ದಾರೆ.

ಪ್ರಧಾನಿ ಮೋದಿ, ಅಮಿತ್ ಶಾ ಬಳಿಕ ಪ್ರಹ್ಲಾದ್ ಜೋಶಿ ಅವರೇ ಬಿಜೆಪಿ ಟಾಪ್ ಲೀಡರ್ ಆಗಿದ್ದು, ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿಶ್ವಾಸ ಗಳಿಸಿರುವ ನಾಯಕರಾಗಿದ್ದಾರೆ. ಇನ್ನು ಪಕ್ಷದ ಸಿದ್ಧಾಂತ ಮತ್ತು ಸಂಘಟನೆಗೆ ಅತಿ ಮುಖ್ಯವಾಗಿರುವ RSS ಸಂಘಟನೆಗೂ ಜೋಶಿ ಆತ್ಮೀಯರಾಗಿದ್ದು, ಈಗಾಗಲೇ ಆರೆಸ್ಸೆಸ್‌ನಿಂದಲೂ ಅವರ ಹೆಸರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಸಂಘಟನೆ ಮತ್ತು ಆಡಳಿತದಲ್ಲಿ ತಮ್ಮ ಕಾರ್ಯ ವೈಖರಿ ಮೂಲಕ ಖ್ಯಾತಿ ಗಳಿಸಿರುವ ಕೇಂದ್ರ ಆಹಾರ & ನಾಗರಿಕ ಪೊರೈಕೆ ಸಚಿವ ಪ್ರಹ್ಲಾದ್ ಜೋಶಿ ಅವರು ಈಗ ರಾಷ್ಟ್ರೀಯ ಬಿಜೆಪಿಗೆ ಬಾಸ್ ಆಗುವ ಹಾದಿಯಲ್ಲಿದ್ದಾರೆ.

ಜೆ.ಪಿ. ನಡ್ಡಾ ಅವರ ರಾಷ್ಟ್ರಾಧ್ಯಕ್ಷ ಅಧಿಕಾರಾವಧಿಯು ಜೂನ್ 2024ಕ್ಕೆ ಮುಗಿದಿತ್ತು. ಆದರೆ, ಬಿಹಾರ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಅವರ ಅಧಿಕಾರಾವಧಿಯನ್ನು ಮುಂದುವರಿಸಲಾಗಿತ್ತು. ಬಿಹಾರ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಈಗ ಜೆಪಿ ನಡ್ಡಾ ಬದಲಿಸಿ ಪ್ರಹ್ಲಾದ್ ಜೋಶಿ & ಧರ್ಮೇಂದ್ರ ಪ್ರಧಾನ್ಗೆ ಪಟ್ಟ ನೀಡಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇಮಕಕ್ಕೆ ಮೋದಿ & ಅಮಿತ್ ಶಾ ಅಸ್ತು ಎಂದಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಈ ಕುರಿತು ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.
ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿರುವ ಪ್ರಹ್ಲಾದ್ ಜೋಶಿ ಅವರಿಗೆ ಈ ಉನ್ನತ ಸ್ಥಾನ ಒಲಿದು ಬಂದರೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆ ಪಡೆಯಲಿರುವ ಏಕೈಕ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಇದು ಇಡೀ ಕರ್ನಾಟಕಕ್ಕೆ ಹೆಮ್ಮೆಯ ಕ್ಷಣವಾಗಲಿದೆ.
ಇದನ್ನೂ ಓದಿ : ಕನ್ನಡ ಚಿತ್ರರಂಗದ ಹಾಸ್ಯ ನಟ ಎಂ.ಎಸ್ ಉಮೇಶ್ ವಿಧಿವಶ!







