ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪ್ರದಾನ!

ರಾಯಚೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಆಫ್ರಿಕಾದ ಮೈಲ್ಸ್ ಲೀಡರ್‌ಶಿಪ್ ವಿಶ್ವವಿದ್ಯಾಲಯದ ವತಿಯಿಂದ ಮಂತ್ರಾಲಯದ ಶ್ರೀ ಯೋಗೀಂದ್ರ ಸಭಾ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಗೌರವ ಡಾಕ್ಟರೇಟ್ ಪ್ರದಾನ ಸಮಾರಂಭವು ಮಂತ್ರಾಲಯದ ಶ್ರೀ ಮಠದ ಆವರಣದಲ್ಲಿರುವ ಶ್ರೀ ಯೋಗೀಂದ್ರ ಸಭಾ ಮಂಟಪದಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ವೇಳೆ ಮೈಲ್ಸ್ ಲೀಡರ್‌ಶಿಪ್ ವಿಶ್ವವಿದ್ಯಾಲಯದ ಅಧಿಕಾರಿಗಳು, ಮಠದ ಅಧಿಕಾರಿಗಳು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಕನ್ನಡಿಗ ಪ್ರಹ್ಲಾದ್ ಜೋಶಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟ? ಹೈಕಮಾಂಡ್‌ನಿಂದ ಸಿಕ್ತಾ ಗ್ರೀನ್‌ ಸಿಗ್ನಲ್?

Btv Kannada
Author: Btv Kannada

Read More