ಬೆಂಗಳೂರು : ದಿತ್ವಾ ಚಂಡಮಾರುತದ ಪರಿಣಾಮವು ರಾಜ್ಯದ ರಾಜಧಾನಿ ಬೆಂಗಳೂರಿನ ಮೇಲೂ ಬೀರಿದೆ. ಕಳೆದ ಒಂದು ವಾರದಿಂದ ನಗರದಲ್ಲಿ ಚಳಿ ಹೆಚ್ಚಾಗಿದ್ದು, ಇಂದು ಬೆಳ್ಳಂಬೆಳಗ್ಗೆಯೇ ನಗರದಲ್ಲಿ ತುಂತುರು ಮಳೆ ಸುರಿದಿದೆ.
ಬೆಂಗಳೂರು ನಗರದ ತಾಪಮಾನವು ಗಣನೀಯವಾಗಿ ಕುಸಿದಿದೆ. ಇಂದು ಬೆಳಿಗ್ಗೆ ದಾಖಲಾದಂತೆ, ತಾಪಮಾನವು 19 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ತೀವ್ರವಾದ ಚಳಿ ಮತ್ತು ಈ ತುಂತುರು ಮಳೆಯ ಕಾರಣದಿಂದಾಗಿ ಜನಜೀವನ ಕೊಂಚಮಟ್ಟಿಗೆ ಅಸ್ತವ್ಯಸ್ತಗೊಂಡಿದ್ದು, ಜನರು ಚಳಿಗೆ ನಡುಗುವಂತಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದಿತ್ವಾ ಚಂಡಮಾರುತದ ಪ್ರಭಾವ ಇನ್ನೂ ಕೆಲ ದಿನಗಳ ಕಾಲ ಮುಂದುವರೆಯುವ ಸಾಧ್ಯತೆ ಇದೆ. ಒಂದು ವಾರಗಳ ಕಾಲ ಬೆಂಗಳೂರಿನಲ್ಲಿ ತುಂತುರು ಮಳೆ ಮುಂದುವರೆಯುವ ನಿರೀಕ್ಷೆ ಇದೆ. ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ – ಅಮ್ಮ-ಮಗ ಸ್ಥಳದಲ್ಲೇ ಸಾವು!







