ದಾವಣಗೆರೆ : ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಫುಡ್ ಆಫೀಸರ್ಸ್ ದಿಢೀರ್ ಕಾರ್ಯಾಚರಣೆ ನಡೆಸಿ, ಅನ್ನಭಾಗ್ಯ ಯೋಜನೆಯಡಿ ಅಕ್ರಮವಾಗಿ ಮಾರಾಟಕ್ಕೆ ಸಿದ್ಧವಾಗಿದ್ದ 50 ಕೆಜಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಆಹಾರ ನಿರೀಕ್ಷಕರು ನಜ್ರುಲ್, ಜಗದೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಅನ್ನಭಾಗ್ಯ ಯೋಜನೆಯ ಉಚಿತ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಸಂತೆಯಲ್ಲಿ ಮಾರಾಟ ಮಾಡಲು ಮುಂದಾಗಿದ್ದರು. ದಾಳಿ ನಡೆಸಿದ ತಂಡ ಸುಮಾರು 50 ಕೆ.ಜಿ ತೂಕದ 48 ಚೀಲಗಳನ್ನು ವಶಕ್ಕೆ ಪಡೆದಿದೆ.
ಈ ಸಂಬಂಧ ಹರಿಹರ ನಗರದ ಟೌನ್ ಪೊಲೀಸ್ ಠಾಣೆಯಲ್ಲಿ PCR ದಾಖಲಾಗಿದೆ. ಆಹಾರ ನಿರೀಕ್ಷಕರು ಮತ್ತು ಸಿಬ್ಬಂದಿಯ ಈ ಕಾರ್ಯಕ್ಕೆ ಸ್ಥಳೀಯ ಸಾರ್ವಜನಿಕರಿಂದ ಹಾಗೂ ಜನಸಾಮಾನ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ : ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಚಿತ್ರ ಜ.2ಕ್ಕೆ ದೇಶದಾದ್ಯಂತ ರಿಲೀಸ್!
Author: Btv Kannada
Post Views: 184







