ಬೆಂಗಳೂರು : ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥರನ್ನಾಗಿ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ. ಸೌಭಾಗ್ಯ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ತಾಯಿ.
ಸೌಭಾಗ್ಯ ಎರಡು ವರ್ಷದ ಹಿಂದೆ ಗಂಡನನ್ನ ಕಳೆದುಕೊಂಡಿದ್ದರು. ಮೂಲತಃ ಕೈವಾರದ ಮೂಲ ನಿವಾಸಿಯಾಗಿರುವ ಸೌಭಾಗ್ಯ ಬೆಂಗಳೂರಿನ ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್‌ನಲ್ಲಿ ಮನೆ ಬಾಡಿಗೆ ಪಡೆದು ಇದ್ದರು.
ಇಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡು ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಸೌಭಾಗ್ಯ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಸೌಭಾಗ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಸದ್ದಿಲ್ಲದೇ ನಿರ್ದೇಶಕ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಮಂತಾ!
Author: Btv Kannada
Post Views: 262







