ಇಂದು ಡಿಸಿಎಂ ನಿವಾಸದಲ್ಲಿ ಸಿಎಂಗೆ ಬ್ರೇಕ್ ಫಾಸ್ಟ್ – ಸಿದ್ದರಾಮಯ್ಯಗೆ ಇಷ್ಟವಾದ ನಾಟಿ ಕೋಳಿ ಸಾರು ರೆಡಿ ಮಾಡಿಸಿದ ಡಿಕೆಶಿ!

ಬೆಂಗಳೂರು : ಕಳೆದ ಮೂರು ದಿನಗಳ ಹಿಂದೆ ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಮೊದಲ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದಿತ್ತು. ಇಂದು ಡಿಸಿಎಂ ಡಿಕೆಶಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಶೇಷ ಬ್ರೇಕ್ ಫಾಸ್ಟ್ ರೆಡಿಯಾಗಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರಿಗಾಗಿ ವಿಶೇಷವಾಗಿ ಅವರ ಇಷ್ಟದ ನಾಟಿ ಕೋಳಿ ರೆಸಿಪಿಯನ್ನು ರೆಡಿ ಮಾಡಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆಶಿ ನಿವಾಸದಲ್ಲಿ ಉಪಹಾರ ಸೇವಿಸಲಿದ್ದಾರೆ. ನಾಟಿ ಕೋಳಿ ಭೋಜನದೊಂದಿಗೆ ಇತರೆ ತಿಂಡಿಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

ಹೈಕಮಾಂಡ್ ಸೂಚನೆ ಮೇರೆಗೆ ಕಳೆದ 3 ದಿನದ ಹಿಂದೆ ಸಿಎಂ- ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದರು. ಆ ದಿನ ಸಿಎಂ ಮತ್ತು ಡಿಸಿಎಂ ಅವರು ಇಡ್ಲಿ ವಡೆ, ಕೇಸರಿ ಬಾತ್, ಉಪ್ಪಿಟ್ಟು ಸವಿದಿದ್ದರು. ಉಪಹಾರದ ನಂತರ ಸಿಎಂ ಮತ್ತು ಡಿಸಿಎಂ ಒಟ್ಟಿಗೆ ಫೋಸ್ ನೀಡಿ, ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಒಗ್ಗಟ್ಟು ಪ್ರದರ್ಶಿಸಿದ್ದರು. ಇದೀಗ ಡಿಕೆ ಶಿವಕುಮಾರ್ ನಿವಾಸದಲ್ಲಿ ಸಿಎಂಗಾಗಿ ಬ್ರೇಕ್ ಫಾಸ್ಟ್ ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ : ಚಿಕ್ಕಪೇಟೆ ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ!

Btv Kannada
Author: Btv Kannada

Read More