ಬೆಂಗಳೂರು : ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಹಗರಣ ಆರೋಪ ಪ್ರಕರಣ ಸಂಬಂಧ ಸಚಿವ ಕೆ.ಜೆ. ಜಾರ್ಜ್ ವಿರುದ್ಧದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಇನ್ನು ಇಂಧನ ಇಲಾಖೆ ಗೌರವ್ ಗುಪ್ತ, ಬೆಸ್ಕಾಂನ ಮಹಾಂತೇಶ ಬೀಳಗಿ ಮತ್ತು ಹೆಚ್.ಜೆ. ರಮೇಶ್ ವಿರುದ್ಧದ ಪ್ರಕರಣವನ್ನೂ ಹೈಕೋರ್ಟ್ ವಜಾಗೊಳಿಸಿದೆ.

ಬಿಜೆಪಿ ನಾಯಕರು ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಇದೀಗ ಆಧಾರಗಳನ್ನು ಪರಿಶೀಲಿಸಿದ ಹೈಕೋರ್ಟ್ ಕೆ.ಜೆ. ಜಾರ್ಜ್ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿ ತೀರ್ಪು ನೀಡಿದೆ.
ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠವು ಈ ಆದೇಶ ನೀಡಿದ್ದು, ಇದು ಸಚಿವ ಕೆ.ಜೆ. ಜಾರ್ಜ್ ಅವರಿಗೆ ಸಿಕ್ಕ ದೊಡ್ಡ ಜಯವಾಗಿದೆ. ಈ ಮೂಲಕ ಸಚಿವ ಜಾರ್ಜ್ ಮತ್ತು ಅಧಿಕಾರಿಗಳ ಮೇಲಿನ ಕಾನೂನು ಪ್ರಕ್ರಿಯೆಗೆ ತೆರೆ ಬಿದ್ದಿದೆ.
ಇದನ್ನೂ ಓದಿ : ಹೊಸ ಯುವನಟನ ಹುಡುಕಾಟದಲ್ಲಿ ನಿರ್ದೇಶಕ ಸುಧೀರ್ ಅತ್ತಾವರ್!
Author: Btv Kannada
Post Views: 221







