ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಸುಕಿನ ಜಾವ ಭೀಕರ ಬಸ್ ಅಪಘಾತ ನಡೆದಿದೆ. ಆಂಧ್ರಪ್ರದೇಶದ ಬದ್ವೆಲ್‌ನಿಂದ ಬೆಂಗಳೂರಿಗೆ ಹೊರಟಿದ್ದ ‘ಹರಿತ ಟ್ರಾವೆಲ್ಸ್’ಗೆ ಸೇರಿದ ಖಾಸಗಿ ಬಸ್, ಮುಂಜಾನೆ ಸುಮಾರು 3 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಓರ್ವ ಮಹಿಳಾ ಪ್ರಯಾಣಿಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಂಧ್ರಪ್ರದೇಶದ ಪೊದುಟೂರು ಮೂಲದ ಅನಿತಾ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯರು ಮತ್ತು ಪೊಲೀಸರು ರಕ್ಷಿಸಿ ಆಂಧ್ರಪ್ರದೇಶದ ಮದನಪಲ್ಲಿ, ಶ್ರೀನಿವಾಸಪುರ ಮತ್ತು ಕೋಲಾರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಈ ಸಂಬಂಧ ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣಗಳ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಪೋಕ್ಸೋ ಕೇಸಲ್ಲಿ ಬಿ.ಎಸ್. ಯಡಿಯೂರಪ್ಪಗೆ ರಿಲೀಫ್ – ಮಧ್ಯಂತರ ತಡೆ ನೀಡಿದ ಸುಪ್ರೀಂ ಕೋರ್ಟ್!







