ಬೆಂಗಳೂರು : ವಿವೇಕನಗರ ಪೊಲೀಸರ ವಿರುದ್ದದ ಕೊಲೆ ಆರೋಪ ಕೇಸ್ ಸಂಬಂಧ ಇನ್ಸ್‌ಪೆಕ್ಟರ್ ಶಿವಕುಮಾರ್ ಸೇರಿ ನಾಲ್ವರನ್ನ ಅಮಾನತು ಮಾಡಿ ಕಮಿಷನರ್ ಸೀಮಂತ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ದರ್ಶನ್ ಎಂಬಾತನನ್ನು ಗಲಾಟೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಸಂಬಂಧ ವಿವೇಕನಗರ ಪೊಲೀಸರು ಆತನನ್ನು ಅಕ್ರಮವಾಗಿ ಠಾಣೆಯಲ್ಲಿ ಇರಿಸಿಕೊಂಡಿದ್ದರು ಎನ್ನಲಾಗಿದೆ. ಸ್ಟೇಷನ್‌ನಲ್ಲಿ ಇರಿಸಿದ್ದು ಮಾತ್ರವಲ್ಲದೆ, ದರ್ಶನ್ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆ ಬಳಿಕ ರಿಹ್ಯಾಬಿಲೇಷನ್ ಸೆಂಟರ್ಗೆ ಕಳಿಸಿದ್ದು, 10 ದಿನದ ಬಳಿಕ ಸಾವನ್ನಪ್ಪಿದ್ದಾರೆ.
ದರ್ಶನ್ ಕೊಲೆ ಆರೋಪ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ FIR ದಾಖಲಾಗಿತ್ತು. ಇದೀಗ ವಿವೇಕನಗರ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಸೇರಿ ನಾಲ್ವರನ್ನ ಸಸ್ಪೆಂಡ್ ಮಾಡಿದ್ದಾರೆ. ಶಿವಕುಮಾರ್ ಅಮಾನತಿನ ಹಿನ್ನೆಲೆಯಲ್ಲಿ ವಿವೇಕನಗರ ಠಾಣೆಗೆ ಹೊಸ ಇನ್ಸ್‌ಪೆಕ್ಟರ್ ಅವರನ್ನು ನೇಮಕ ಮಾಡಲಾಗಿದೆ. ಸಿಸಿಬಿ ಇನ್ಸ್‌ಪೆಕ್ಟರ್ ಆಗಿದ್ದ ವೀರೇಶ್ ಅವರನ್ನು ವಿವೇಕನಗರ ಠಾಣೆಗೆ ವರ್ಗಾವಣೆ ಮಾಡಿ ಇನ್ಸ್‌ಪೆಕ್ಟರ್ ಆಗಿ ನೇಮಿಸಲಾಗಿದೆ.
ಇದನ್ನೂ ಓದಿ : ಕೋಲಾರ ಬಳಿ ಭೀಕರ ಬಸ್ ಅಪಘಾತ – ಡಿವೈಡರ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ, ಓರ್ವ ಮಹಿಳೆ ಸಾವು!







