ಮಂಗಳೂರಿನಲ್ಲಿ ಸಿಎಂ ಸಿದ್ದು, ಕೆಸಿ ವೇಣುಗೋಪಾಲ್ – ಸಮಾವೇಶಕ್ಕೂ ಮುನ್ನ​​ ಹೈವೋಲ್ಟೇಜ್ ಮೀಟಿಂಗ್!

ಮಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಗಳೂರಿಗೆ ಆಗಮಿಸಿದ್ದಾರೆ. ಏರ್​​ಪೋರ್ಟ್​ಗೆ ಸಿದ್ದು ಬರ್ತಿದ್ದಂತೆ ಡಿಕೆಶಿ ಬೆಂಬಲಿಗರು ಡಿಕೆ ಡಿಕೆ ಎಂದು ಘೋಷಣೆ ಕೂಗಿದ್ದಾರೆ.  ಅಷ್ಟೇ ಅಲ್ಲದೆ ಕೆ.ಸಿ. ವೇಣುಗೋಪಾಲ್ ಅವರ ಮುಂದೆಯೂ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ ಮಿಥುನ್ ರೈ ಹಾಗೂ ಬೆಂಬಲಿಗರು ಘೋಷಣೆ ಕೂಗಿದ್ದಾರೆ.

ದೆಹಲಿಯಿಂದ ನೇರವಾಗಿ ಮಂಗಳೂರಿಗೆ ಬಂದ ವೇಣುಗೋಪಾಲ್ ಅವರನ್ನು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲೆಯ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ, ಡಿ.ಕೆ.ಶಿವಕುಮಾರ್ ಪರ ಘೋಷಣೆಗಳೊಂದಿಗೆ ಕಾರ್ಯಕರ್ತರು ಭಾರೀ ಜಮಾವಣೆ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು.

ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧಿ ಸಂವಾದ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಭಾಗಿಯಾಗುವ ಮುನ್ನ ಸಿಎಂ-ವೇಣುಗೋಪಾಲ್​​ ಹೈವೋಲ್ಟೇಜ್ ಮೀಟಿಂಗ್ ಮಾಡಲಿದ್ದಾರೆ. ಮಂಗಳೂರು ವಿವಿ ಗೆಸ್ಟ್ ಹೌಸಿನಲ್ಲಿ ಕೆ.ಸಿ. ವೇಣುಗೋಪಾಲ್ ಜೊತೆ ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ಸಭೆ ನಡೆಸಲಿದ್ದಾರೆ. ಕರ್ನಾಟಕ ರಾಜಕೀಯ ಬಗ್ಗೆ ವೇಣುಗೋಪಾಲ್​​ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡ್ತಿದ್ದು, ನಾಯಕರು ಕೆಲಹೊತ್ತು ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ ಉದ್ಯಮಿ ಮನೆಯಿಂದ ಕೋಟಿ ಕೋಟಿ ಹಣ ಕಳ್ಳತನ – ಇಬ್ಬರು ಆರೋಪಿಗಳು ಅರೆಸ್ಟ್!

Btv Kannada
Author: Btv Kannada

Read More