ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಇಂಧನ ಸಚಿವರ ಅಧ್ಯಕ್ಷತೆಯಲ್ಲಿ ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ನಗರದ ವಿದ್ಯುತ್ ಸಮಸ್ಯೆಗಳು, ವಿತರಣಾ ಜಾಲದ ಸುಧಾರಣೆ ಮತ್ತು ಇಂಧನ ಇಲಾಖೆಯ ಯೋಜನೆಗಳ ಅನುಷ್ಠಾನದ ಕುರಿತು ಸಭೆಯಲ್ಲಿ ಗಂಭೀರವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ ಪ್ರಮುಖ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ತಮ್ಮ ಕ್ಷೇತ್ರದ ಇಂಧನ ಸಂಬಂಧಿತ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಮಾನ್ಯ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ, ರಾಜರಾಜೇಶ್ವರಿ ನಗರ ಶಾಸಕರಾದ ಶ್ರೀ ಮುನಿರತ್ನ, ಯಶವಂತಪುರ ಶಾಸಕರಾದ ಶ್ರೀ ಎಸ್.ಟಿ. ಸೋಮಶೇಖರ್, ಬಸವನಗುಡಿ ಶಾಸಕರಾದ ಶ್ರೀ ಎಲ್.ಎ. ರವಿ ಸುಬ್ರಹ್ಮಣ್ಯ, ಎಂಎಲ್ಸಿ ಶ್ರೀ ಹೆಚ್.ಎಸ್. ಗೋಪಿನಾಥ್ ರೆಡ್ಡಿ.
ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ, ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎನ್. ಶಿವಶಂಕರ್, ಕೆಆರ್‌ಇಡಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಪಿ. ರುದ್ರಪ್ಪಯ್ಯ, ಇವರೊಂದಿಗೆ ಇಲಾಖೆಯ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ : ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿ ಆತ್ಮಹತ್ಯೆ!







