ಬಸ್​ಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು!

ಬೆಂಗಳೂರು : ಬಸ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು – ತುಮಕೂರು 48 ಹೆದ್ದಾರಿಯ ಮಾದನಾಯಕನಹಳ್ಳಿ ಬಳಿ ನಡೆದಿದೆ. ಸುಮಂತ್ ಜೆ ಗೌಡ (21) ಮೃತ ಯುವಕ.

ಸುಮಂತ್ ತನ್ನ ಸ್ನೇಹಿತನನ್ನ ನೋಡಲು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಖಾಸಗಿ ಬಸ್ ನಿಲ್ಲಿಸಿದ ಪರಿಣಾಮ ಹಿಂದೆ ಬೈಕ್‌ನಲ್ಲಿ ಬರುತ್ತಿದ್ದ ಸುಮಂತ್ ಕಂಟ್ರೋಲ್ ಸಿಗದೇ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ಪರಿಣಾಮ ಸುಮಂತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕರ್ನಾಟಕ ಪೊಲೀಸ್ ಇಲಾಖೆ ಮರ್ಯಾದೆ ತೆಗೆದ ಮತ್ತೊಬ್ಬ ಪೊಲೀಸಪ್ಪ – 11 ಲಕ್ಷ ಕದ್ದು ಪತ್ನಿಗೆ ಗೋಲ್ಡ್ ಗಿಫ್ಟ್ ಕೊಟ್ಟ ಹೆಡ್ ಕಾನ್ಸ್ಟೇಬಲ್!

Btv Kannada
Author: Btv Kannada

Read More