ಹೆತ್ತ ತಂದೆಯಿಂದಲೇ 13 ವರ್ಷದ ಮಗಳ ಮೇಲೆ ಅತ್ಯಾಚಾರ!

ಚಿತ್ರದುರ್ಗ : ಹೆತ್ತ ತಂದೆಯೇ ಅಮಾನುಷ ಕೃತ್ಯ ಎಸಗಿರುವ ಘಟನೆಯೊಂದು ಚಿತ್ರದುರ್ಗದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯಾದ್ಯಂತ ಈ ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗದಲ್ಲಿ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಆಕೆಯ ತಂದೆ ಮಂಜುನಾಥ್ ಅತ್ಯಾಚಾರ ಎಸಗಿದ್ದಾನೆ. ಹುಟ್ಟುಹಬ್ಬದಂದೇ ಆಕೆಯನ್ನು ಹೊಲಕ್ಕೆ ಕರೆದೊಯ್ದು ಈ ಕೃತ್ಯವೆಸಗಲಾಗಿದೆ. ಮೂರು ದಿನಗಳ ನಂತರ ಘಟನೆ ಬೆಳಕಿಗೆ ಬಂದಿದ್ದು, ಅತ್ಯಾಚಾರದ ವಿಷಯ ಮುಚ್ಚಿಹಾಕಲು ಯತ್ನಿಸಿದ ತಾಯಿಯನ್ನೂ ಪೊಲೀಸರು ಬಂಧಿಸಿದ್ದಾರೆ. ಕೋಪಗೊಂಡ ಗ್ರಾಮಸ್ಥರು ತಂದೆ-ತಾಯಿ ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಚಿತ್ರದುರ್ಗದ ಎಸ್ಪಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಹೆಚ್ಚಿನ ಭದ್ರತೆಗಾಗಿ ಸಂತ್ರಸ್ತ ಬಾಲಕಿಯನ್ನು ಚಿತ್ರದುರ್ಗದ ಬಾಲ ಭವನಕ್ಕೆ ಸ್ಥಳಾಂತರಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬಸ್​ಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು!

Btv Kannada
Author: Btv Kannada

Read More