ಬೆಂಗಳೂರು : ನಮ್ಮ ಮೆಟ್ರೋ ರೈಲು ಮಾರ್ಗಗಳು ಇದೀಗ ಆತ್ಮಹತ್ಯಾ ತಾಣಗಳಾಗುತ್ತಿವೆ ಎಂಬ ಆತಂಕಕಾರಿ ಪ್ರಶ್ನೆ ಮುನ್ನೆಲೆಗೆ ಬಂದಿದೆ. ದಿನೇ ದಿನೇ ಮೆಟ್ರೋ ಹಳಿಗಳ ಮೇಲೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಬೆಳಗ್ಗೆ ಕೆಂಗೇರಿ ಮೆಟ್ರೋ ನಿಲ್ದಾಣದ ಟ್ರ್ಯಾಕ್‌ನಲ್ಲಿ ಮತ್ತೊಬ್ಬ ವ್ಯಕ್ತಿ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ನಡೆದಿದೆ.

ವೈಟ್‌ಫೀಲ್ಡ್‌ನಿಂದ ಚೆಲ್ಲಘಟ್ಟದವರೆಗೆ ವಿಸ್ತರಿಸಿರುವ ನೇರಳೆ ಮಾರ್ಗದಲ್ಲಿ ಈ ದುರಂತ ಸಂಭವಿಸಿದೆ. ಬೆಳಿಗ್ಗೆ 8.15ರ ಸುಮಾರಿಗೆ ಕೆಂಗೇರಿ ಮೆಟ್ರೋ ಸ್ಟೇಷನ್‌ನ ಟ್ರ್ಯಾಕ್ ಮೇಲೆ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಈ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಪ್ರಯಾಣಿಕರ ಸುರಕ್ಷತೆ ಮತ್ತು ಕಾರ್ಯಾಚರಣೆಯ ದೃಷ್ಟಿಯಿಂದ ಮೈಸೂರು ರಸ್ತೆಯಿಂದ ಚೆಲ್ಲಘಟ್ಟದವರೆಗಿನ ನೇರಳೆ ಮಾರ್ಗದ ಮೆಟ್ರೋ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು.
ಇದನ್ನೂ ಓದಿ : ಸಂಕ್ರಾಂತಿ ಬಳಿಕ ಡಿಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಪಟ್ಟ – ಬಜೆಟ್ ಮುಗಿದ ಮೇಲೆ ಸಿಎಂ ಆಗ್ತಾರಂತೆ ಡಿಕೆ ಶಿವಕುಮಾರ್!







