ಬೆಂಗಳೂರು : ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿ ಸಿಬ್ಬಂದಿ ಕೊರತೆ ಮತ್ತು ಕಾರ್ಯಾಚರಣೆಯ ಸಮಸ್ಯೆಗಳಿಂದಾಗಿ ದೇಶಾದ್ಯಂತ 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಂಡಿದೆ. ಒಂದೇ ದಿನದಲ್ಲಿ ಮುಂಬೈ, ದೆಹಲಿ, ಬೆಂಗಳೂರು, ಕೋಲ್ಕತ್ತಾ, ಗೋವಾ, ಹೈದರಾಬಾದ್ ಮತ್ತು ಪುಣೆ ಸೇರಿದಂತೆ ಹಲವು ಪ್ರಮುಖ ಮಾರ್ಗಗಳಲ್ಲಿ ವಿಮಾನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ವಿಮಾನಗಳ ಹಠಾತ್ ರದ್ದತಿಯಿಂದಾಗಿ ಪ್ರಯಾಣಿಕರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್-1 ಬಳಿ ವಿಮಾನ ಪ್ರಯಾಣಿಕರು ಸಂಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಭಾರೀ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಿಂದಾಗಿ ವಿಮಾನ ನಿಲ್ದಾಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಕಳೆದ ಬುಧವಾರದಿಂದಲೇ ಇಂಡಿಗೋ ವಿಮಾನಗಳ ಹಾರಾಟದಲ್ಲಿ ಈ ವ್ಯತ್ಯಯ ಉಂಟಾಗಿದೆ. ಈ ಗಂಭೀರ ಸಮಸ್ಯೆಯನ್ನು ಮನಗಂಡು, ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ (DGCA)ಯು ವಿಮಾನಗಳ ಹಾರಾಟದಲ್ಲಿನ ಈ ವ್ಯಾಪಕ ಸಮಸ್ಯೆ ಮತ್ತು ರದ್ದತಿಗಳ ಬಗ್ಗೆ ಸಮಗ್ರ ತನಿಖೆ ಆರಂಭಿಸಿದೆ.
ಇದನ್ನೂ ಓದಿ : ಬೆಂಗಳೂರಿನ ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ – ತನಿಖೆ ಮುಂದುವರಿಸಿದ ಪೊಲೀಸರು!







