ಹುಬ್ಬಳ್ಳಿ : ಡಿವೈಡರ್ಗೆ ಕಾರು ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಇದರಲ್ಲಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಸಜೀವ ದಹನವಾಗಿರುವ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರಹೊಲವಯದಲ್ಲಿ ನಡೆದಿದೆ.

ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿದ್ದ ಪಂಚಾಕ್ಷರಯ್ಯ ಸಾಲಿಮಠ ಅವರು ಗದಗದಲ್ಲಿರುವ ತಮ್ಮ ಕುಟುಂಬವನ್ನು ನೋಡಲು ಹೊರಟಿದ್ದರು. ಈ ವೇಳೆ I20 ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಧಗಧಗ ಹೊತ್ತಿ ಉರಿದಿದೆ. ಕಾರಿನಿಂದ ಹೊರಬರಲಾರದೆ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಅವರು ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿದ್ದ ಪಂಚಾಕ್ಷರಯ್ಯ ಸಾಲಿಮಠ ಸಜೀವ ದಹನವಾಗಿದ್ದಾರೆ. ಈ ಫಟನೆ ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ನಟ ದರ್ಶನ್ ಬೆನ್ನುನೋವು ನಾಟಕ ಬಯಲು? ವೈದ್ಯರು ಹೇಳಿದ್ದೇನು?
Author: Btv Kannada
Post Views: 236







