ಇಂದಿನಿಂದಲೇ ದರ್ಶನ್ ಅಭಿನಯದ ‘ದಿ ಡೆವಿಲ್’ ಅಡ್ವಾನ್ಸ್ ಬುಕ್ಕಿಂಗ್ ಶುರು!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಇದೇ ಡಿಸೆಂಬರ್ 11ರಂದು ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಈ ಚಿತ್ರದ ಮೇಲೆ ಫ್ಯಾನ್ಸ್​​ಗೆ ಕುತೂಹಲ ಹೆಚ್ಚಾಗಿದ್ದು, ಇಂದಿನಿಂದಲೇ ‘ದಿ ಡೆವಿಲ್’ ಚಿತ್ರದ ಅಡ್ವಾನ್ಸ್ ಬುಕ್ಕಿಂಗ್ ಓಪನ್ ಆಗಲಿದೆ.

ಇಂದು ಮಧ್ಯಾಹ್ನ 1ಗಂಟೆಯಿಂದ ಈ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ ಓಪನ್ ಆಗಲಿದ್ದು, ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದೆ. ‘ದಿ ಡೆವಿಲ್’ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಯಲ್ಲೇ 7 ಮಿಲಿಯನ್ ವೀಕ್ಷಣೆಗಳನ್ನು ದಾಟಿ ದಾಖಲೆ ಬರೆದಿದೆ. ದರ್ಶನ್ ಅವರನ್ನು ಹೊಸ ಅವತಾರದಲ್ಲಿ ನೋಡಿ ಅಭಿಮಾನಿಗಳ ಸಂಭ್ರಮಿಸಿದ್ದಾರೆ.

ಚಿತ್ರದಲ್ಲಿ ದರ್ಶನ್ ಅವರು ಹಲವು ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದು, ಅವರ ಸ್ಟೈಲಿಶ್ ಲುಕ್ ಮತ್ತು ಮಾಸ್ ಡೈಲಾಗ್‌ಗಳು ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿವೆ. ಟ್ರೇಲರ್‌ನಲ್ಲಿ ದರ್ಶನ್ ಹೇಳುವ, “ಸೂರ್ಯಂಗೆ ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನು ಬರ್ತಿದೀನಿ ಚಿನ್ನ” ಎಂಬ ಡೈಲಾಗ್ ಈಗಾಗಲೇ ಎಲ್ಲೆಡೆ ವೈರಲ್ ಆಗಿದ್ದು, ಸಿನಿಮಾದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

‘ದಿ ಡೆವಿಲ್’ ಚಿತ್ರವು ಡಿಸೆಂಬರ್ 11ರಂದು ತೆರೆ ಕಾಣುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ದರ್ಶನ್ ಮ್ಯಾಜಿಕ್ ನೋಡಲು ಸಿನಿಪ್ರಿಯರು ಕಾತುರರಾಗಿದ್ದಾರೆ.

ಇದನ್ನೂ ಓದಿ : ಮಾರಾಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆ!

Btv Kannada
Author: Btv Kannada

Read More