ಗೋವಾ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ – 25 ಮಂದಿ ಸಜೀವ ದಹನ!

ಗೋವಾ : ಉತ್ತರ ಗೋವಾದ ಅರ್ಪೋರಾದಲ್ಲಿರುವ ಫೇಮಸ್ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರಿ 25 ಮಂದಿ ಸಜೀವದಹನವಾಗಿದ್ದಾರೆ. ಈ ದುರಂತದಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಧ್ಯರಾತ್ರಿ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದೇ ಈ ಅವಘಡಕ್ಕೆ ಕಾರಣ ಎಂದು ತಿಳಿದುಬಂದಿದೆ. ನೈಟ್‌ ಕ್ಲಬ್‌ನಲ್ಲಿ ಯಾವುದೇ ಅಗ್ನಿ ಸುರಕ್ಷತಾ ನಿಯಮ ಪಾಲಿಸಿಲ್ಲ, ರೂಲ್ಸ್ ಪಾಲಿಸದಿರುವುದೇ ಹೆಚ್ಚಿನ ಸಾವು-ನೋವುಗಳಿಗೆ ಮುಖ್ಯ ಕಾರಣ ಎನ್ನಲಾಗಿದೆ.

ಸ್ಫೋಟದ ತೀವ್ರತೆಗೆ ಬೆಂಕಿಯು ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು, ಸ್ಥಳದಲ್ಲಿದ್ದವರಿಗೆ ಹೊರಹೋಗಲು ಆಗಲಿಲ್ಲ. ಈ ಭೀಕರ ದುರಂತದಲ್ಲಿ 25 ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಭೀಕರ ಅಗ್ನಿ ದುರಂತದ ಬಗ್ಗೆ ಸಮಗ್ರ ತನಿಖೆಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಆದೇಶಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ : ಭಾರತೀಯ ಕಲೆ ಮತ್ತು ಕರಕುಶಲತೆಗೆ ನೀತಾ ಅಂಬಾನಿ ಅವರಿಂದ ವಿಶೇಷ ಗೌರವ – ಸ್ವದೇಶ್ ಫ್ಲಾಗ್‌ಶಿಪ್ ಸ್ಟೋರ್‌ನಲ್ಲಿ ಸಾಂಸ್ಕೃತಿಕ ವೈಭವ!

Btv Kannada
Author: Btv Kannada

Read More