ಮದುವೆ ರದ್ದಾಗಿದೆ – ಕೊನೆಗೂ ಮೌನ ಮುರಿದು ವದಂತಿಗಳಿಗೆ ತೆರೆ ಎಳೆದ ಸ್ಮೃತಿ ಮಂಧಾನ!

ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ತಮ್ಮ ಮದುವೆ ಬಗ್ಗೆ ಕೇಳಿ ಬಂದ ಊಹಾಪೋಹಗಳ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಪಲಾಶ್ ಮುಚ್ಚಲ್ ಜೊತೆಗಿನ ಮದುವೆಯನ್ನು ಕ್ಯಾನ್ಸಲ್ ಮಾಡಲಾಗಿದ್ದು, ಈ ವಿಷಯವನ್ನು ಇಲ್ಲಿಗೆ ನಿಲ್ಲಿಸಲು ನಾನು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ನಾನಾ ವದಂತಿಗಳಿಗೆ ಸ್ಮೃತಿ ಮಂಧಾನ ತೆರೆ ಎಳೆದಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಸ್ಮೃತಿ ಮಂಧಾನ, ಕಳೆದ ಕೆಲವು ವಾರಗಳಿಂದ ನನ್ನ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳು ಹಬ್ಬಿವೆ. ಈ ಸಮಯದಲ್ಲಿ ಈ ಬಗ್ಗೆ ನಾನು ಮಾತನಾಡುವುದು ಮುಖ್ಯ ಎಂದು ಭಾವಿಸುತ್ತೇನೆ. ನಾನು ತುಂಬಾ ಖಾಸಗಿ ವ್ಯಕ್ತಿ, ಮತ್ತು ನಾನು ಅದನ್ನು ಹಾಗೆಯೇ ಇಡಲು ಬಯಸುತ್ತೇನೆ. ಇದಾಗ್ಯೂ ಮದುವೆಯನ್ನು ರದ್ದುಗೊಳಿಸಲಾಗಿದೆ ಎಂದು ನಾನು ಸ್ಪಷ್ಟಪಡಿಸುತ್ತೇನೆ.

ಈ ವಿಷಯವನ್ನು ಇಲ್ಲಿಗೆ ನಿಲ್ಲಿಸಲು ನಾನು ಬಯಸುತ್ತೇನೆ ಮತ್ತು ನಿಮ್ಮೆಲ್ಲರೂ ಅದೇ ರೀತಿ ಮಾಡಬೇಕೆಂದು ಒತ್ತಾಯಿಸುತ್ತೇನೆ. ದಯವಿಟ್ಟು ಈ ಸಮಯದಲ್ಲಿ ಎರಡೂ ಕುಟುಂಬಗಳ ಗೌಪ್ಯತೆಯನ್ನು ಗೌರವಿಸಿ ಮತ್ತು ನಮಗೆ ಮುಂದುವರಿಯಲು ಅವಕಾಶ ನೀಡಬೇಕೆಂದು ನಾನು ವಿನಂತಿಸುತ್ತೇನೆ.

ನಮ್ಮೆಲ್ಲರನ್ನೂ ಒಂದು ಉದ್ದೇಶ ಮುನ್ನಡೆಸುತ್ತದೆ ಎಂದು ಭಾವಿಸುತ್ತೇನೆ. ನನಗೆ, ಅದು ಯಾವಾಗಲೂ ನನ್ನ ದೇಶವನ್ನು ಪ್ರತಿನಿಧಿಸುವುದಾಗಿದೆ. ನಾನು ಭಾರತಕ್ಕಾಗಿ ದೀರ್ಘಕಾಲ ಆಡುವುದನ್ನು ಮತ್ತು ಟ್ರೋಫಿಗಳನ್ನು ಗೆಲ್ಲುವುದನ್ನು ಮುಂದುವರಿಸಲು ಆಶಿಸುತ್ತೇನೆ. ಅದುವೇ ನನ್ನ ಗಮನವಾಗಿರುತ್ತದೆ. ನಿಮ್ಮ ಬೆಂಬಲಕ್ಕೆ ಧನ್ಯವಾದಗಳು. ಮುಂದುವರಿಯುವ ಸಮಯ ಇದು ಎಂದು ಎಂದು ಸ್ಮೃತಿ ಇನ್​ಸ್ಟಾಗ್ರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ಅದ್ಧೂರಿಯಾಗಿ ಸೆಟ್ಟೇರಿದ ರಿಷಿ-ರಿತನ್ಯಾ ನಟನೆಯ ‘ಜವರ’ ಸಿನಿಮಾ!

Btv Kannada
Author: Btv Kannada

Read More