ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ – ರಾಜ್ಯ ಸರ್ಕಾರ ಕಟ್ಟಿಹಾಕಲು ವಿಪಕ್ಷಗಳು ಸಜ್ಜು!

ಬೆಳಗಾವಿ : ಇಂದಿನಿಂದ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. 10 ದಿನಗಳ ಕಾಲ ನಡೆಯಲಿರುವ ಅಧಿವೇಶನಕ್ಕೆ ಕುಂದಾನಗರಿ ಸಜ್ಜಾಗಿದೆ. ಚಳಿಗಾಲದ ಅಧಿವೇಶನ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ.

ರಾಜ್ಯ ಸರ್ಕಾರ & ವಿಪಕ್ಷಗಳು ಬೆಳಗಾವಿಯಲ್ಲಿ ಬೀಡುಬಿಟ್ಟಿದ್ದು, ಅಧಿವೇಶನದಲ್ಲಿ ಸುಮಾರು 30 ಮಸೂದೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಇನ್ನು ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯ ಬಗ್ಗೆ ಚರ್ಚೆ ನಡೆಯಲಿದೆ. 20,000 ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿದ್ದು, ಕುರ್ಚಿ ಕದನದಿಂದ ಸದ್ದು ಮಾಡುತ್ತಿದ್ದ ರಾಜಕೀಯ ಇದೀಗ ಬೆಳಗಾವಿಗೆ ಶಿಫ್ಟ್ ಆಗಿದೆ. 3,000 ರೂಂ ಬುಕ್‌, 10 ದಿನಗಳ ಅಧಿವೇಶನಕ್ಕೆ 21 ಕೋಟಿ ಖರ್ಚು ಮಾಡಲಾಗಿದೆ.

ಅಧಿವೇಶನದಲ್ಲಿ ಸರಣಿ ಸಮಸ್ಯೆ ಮುಂದಿಟ್ಟು ಸರ್ಕಾರ ಕಟ್ಟಿಹಾಕಲು ವಿಪಕ್ಷಗಳು ಸಜ್ಜಾಗಿದೆ. ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್ ನಾಯಕರಿಂದ ಭರ್ಜರಿ ಸಿದ್ಧತೆ ನಡೆಸಿದ್ದು,
ಮೊದಲ ದಿನವಾದ ಇಂದು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆ ಮಾಡಲಾಗುತ್ತದೆ. ಇಂದೇ ಉತ್ತರ ಕರ್ನಾಟಕ ಬಗ್ಗೆ ಚರ್ಚೆಗೆ ನಿಲುವಳಿ ಮಂಡಿಸಲು ಬಿಜೆಪಿ ಸಿದ್ಧತೆ ಮಾಡಿದ್ದು,
ಅಧಿವೇಶನದಲ್ಲಿ ಸರ್ಕಾರ & ವಿಪಕ್ಷಗಳ ಮಧ್ಯೆ ಹಂಗಾಮ ನಡೆಯುವ ಸಾಧ್ಯತೆಯಿದೆ. ಅನ್ನದಾತರ ಸಮಸ್ಯೆ ಇಟ್ಟುಕೊಂಡೇ ಹೋರಾಟಕ್ಕಿಳಿಯಲು ಬಿಜೆಪಿ ಸರ್ವ ಸನ್ನದ್ಧವಾಗಿದ್ದು,
ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದಿದೆ.

ಮೆಕ್ಕೆಜೋಳ, ಕಬ್ಬಿಗೆ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ. ತುಂಗಭದ್ರಾ ಡ್ಯಾಂ ಕ್ರೆಸ್ಟ್ ಗೇಟ್ ವಿಚಾರ ಮುಂದಿಟ್ಟು ಪ್ರತಿಭಟನೆಗೆ ಬಿಜೆಪಿ ರೆಡಿಯಾಗಿದ್ದು,
ಬೆಳಗಾವಿಯಲ್ಲಿ 20 ಸಾವಿರ ರೈತರನ್ನು ಸೇರಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಮಾಡಿದೆ.

ಇದನ್ನೂ ಓದಿ : 25 ಲಕ್ಷ ಹಣಕ್ಕಾಗಿ ರೌಡಿ ಮೂಲಕ ನೇಪಾಳಿ ಯುವಕನ ಕಿಡ್ನಾಪ್ – ಬಂಡೆಪಾಳ್ಯ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ವಿರುದ್ಧ DGPಗೆ ದೂರು!

Btv Kannada
Author: Btv Kannada

Read More