ಆರ್‌ಸಿಬಿ-ಡೆಲ್ಲಿ ಕ್ಯಾಪಿಟಲ್ಸ್​​ ಪಂದ್ಯದ ಟಿಕೆಟ್ ಬ್ಲಾಕ್‌ನಲ್ಲಿ ಮಾರಾಟ.. 8 ಮಂದಿ ಸಿಸಿಬಿ ಬಲೆಗೆ!

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​​ ನಡುವಿನ ಪಂದ್ಯದ ಟಿಕೆಟ್‌ಗಳನ್ನ ದುಪ್ಪಟ್ಟು ಬೆಲೆಗೆ ಬ್ಲಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತಮುತ್ತ, ಕಬ್ಬನ್ ಪಾರ್ಕ್ ಒಳಗೆ ಟಿಕೆಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಡಿಸಿಪಿ ಅಕಾಯ್ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಲಾಗಿದೆ. 

ಮಫ್ತಿಯಲ್ಲಿ ಟಿಕೆಟ್ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರನ್ನು ವಿಚಾರಣೆ ಮಾಡಲಾಗುತ್ತಿದೆ. ಬ್ಲಾಕ್ ಟಿಕೆಟ್ ಹಿಂದೆ ಯಾರಿದ್ದಾರೆ. ಟಿಕೆಟ್ ಹೇಗೆ ಸಿಕ್ತು ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ನ್ಯೂಯಾರ್ಕ್‌ನಲ್ಲಿ ಪ್ರವಾಸಿಗರಿದ್ದ ಹೆಲಿಕಾಪ್ಟರ್ ಪತನ – ಮೂವರು ಮಕ್ಕಳು ಸೇರಿ 6 ಮಂದಿ ದುರ್ಮರಣ!

Btv Kannada
Author: Btv Kannada

Read More

Read More