ಬೆಂಗಳೂರು : ಇಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆಯ ಸಂಭ್ರಮ. ಈ ಹಿನ್ನೆಲೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ವತಿಯಿಂದ ಮಾನವ ಹಕ್ಕುಗಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯ್ತು. ಬೆಂಗಳೂರಿನ ಅಂಬೇಡ್ಕರ್ ವೀಧಿಯಲ್ಲಿರುವ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಚೇರಿಯಲ್ಲಿ ದಿನಾಚರಣೆ ಮಾಡಲಾಯ್ತು.

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ನಿವೃತ್ತ IAS ಅಧಿಕಾರಿ ಡಾ. ಟಿ ಶ್ಯಾಮ್ ಭಟ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. KSHRC ಮಾನವ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾನೂನು ವಿದ್ಯಾರ್ಥಿಗಳಿಗೆ ಹಾಗೂ ಬೆಂಗಳೂರಿನ ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಿತ್ತು.

ಸುಮಾರು 180ಕ್ಕೂ ಹೆಚ್ಚು ಕಾಲೇಜುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಆಯೋಗದ ತಜ್ಞರ ಸಮಿತಿಯ ಮೌಲ್ಯಮಾಪನದ ಬಳಿಕ ಮೂವರನ್ನು ವಿಜೇತರನ್ನಾಗಿ ಆಯ್ಕೆ ಮಾಡಲಾಯ್ತು. ಬೆಳಗಾವಿಯ KLE ಸೊಸೈಟಿಯ ಬಿ.ವಿ.ಬೆಲ್ಲದ್ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಕುಲಕರ್ಣಿ ಪ್ರಥಮ ಸ್ಥಾನ, ಬೆಂಗಳೂರಿನ SJR ಕಾನೂನು ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶ್ರೀವಚನ್ ದ್ವಿತೀಯ ಸ್ಥಾನ, ಹುಬ್ಬಳ್ಳಿ-ಧಾರವಾಡದ ಗುರುಸಿದ್ದಪ್ಪ ಕೋತಂಬಿ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಸಾನಿಯ ಕ್ಕೂ, ಸುಬೇದಾರ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ವಿಜೇತರಿಗೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಯ್ತು. ಇನ್ನು ಮಾನವ ಹಕ್ಕುಗಳ ದಿನಾಚರಣೆಯ ಭಾಗವಾಗಿ KSHRC ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಪ್ರತಿ ತಾಲ್ಲೂಕಿನಲ್ಲೂ ಮಾನವ ಹಕ್ಕುಗಳ ದಿನಾಚರಣೆ ಆಚರಿಸುವಂತೆ ಮನವಿ ಮಾಡಿದೆ. ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಪ್ರತಿಜ್ಞೆಯನ್ನು ಬೋಧಿಸಿ, ಮಾಹಿತಿಪೂರ್ಣ ಕಿರುಪುಸ್ತಕಗಳು ಮತ್ತು ಕರಪತ್ರಗಳನ್ನು ಉಚಿತವಾಗಿ ವಿತರಿಸಲಾಯಿತು.
ಇದನ್ನೂ ಓದಿ : ದರ್ಶನ್ ಆಪ್ತ ನಟ ಧನ್ವೀರ್ಗೆ ಮತ್ತೊಂದು ಸಂಕಷ್ಟ – ಧನ್ವೀರ್ ವಿರುದ್ಧ ಸಾಕ್ಷ್ಯ ನಾಶ ಮಾಡಿದ ಕೇಸ್ ದಾಖಲು?







